ಕೊಪ್ಪಳ: ಸಕಾಲ ನತ್ತು ಐ.ಪಿ.ಜಿ.ಆರ್.ಎಸ್ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೆವಾರಿ ಮಾಡಲು ಸಂಬಂಧಿಸಿದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಕ್ರಮ ವಹಿಸಬೇಕು. ಇಲ್ಲವಾದರೆ ದಂಡ ವಿಧಿಸಬೇಕಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು.
ಇತ್ತೀಚೆಗೆ ಅವರು ಸಕಾಲ ಸಮನ್ವಯ ಸಮಿತಿ ಹಾಗೂ ಐ.ಪಿ.ಜಿ.ಆರ್.ಎಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ‘ಯಾವುದೇ ಸಮಸ್ಯೆಗಳಿದ್ದರೆ ಪ್ರತಿ ಇಲಾಖೆಯ ತಮ್ಮ ಕೇಂದ್ರ ಕಚೇರಿಯಲ್ಲಿರುವ ಸಲಹೆಗಾರರಿಂದ ಮಾರ್ಗದರ್ಶನ ಪಡೆಯಬೇಕು. ಯಾವುದೇ ಕಾರಣಕ್ಕೂ ಅರ್ಜಿಗಳು ಪೆಂಡಿಂಗ್ ಇರಬಾರದು, ಆಗ ಸಕಾರಣವಿಲ್ಲದೆ ತಿರಸ್ಕೃತ ಆಗದಂತೆ ನೋಡಿಕೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.
‘ವಿವಿಧ ಇಲಾಖೆಗಳಲ್ಲಿ ಅರ್ಜಿಗಳನ್ನು ತಿರಸ್ಕೃತ ಮಾಡಿದರೆ ಅದು ಸಕಾಲದಲ್ಲಿಯೇ ಮಾಡಬೇಕು. ಮುಂದಿನ ಸಭೆಗೆ ಬರುವಾಗ ಸರಿಯಾದ ಮಾಹಿತಿಯೊಂದಿಗೆ ಬರಬೇಕು’ ಎಂದು ನಿರ್ದೇಶನ ನೀಡಿದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಜಗದೀಶ್, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ಕುಲಕರ್ಣಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಾಗಮಣಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೆಶಕ ಡಾ. ಪಿ.ಎಂ. ಮಲ್ಲಯ್ಯ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪುಷ್ಪಲತಾ ಕವಲೂರು, ಭೂದಾಖಲೆ ಇಲಾಖೆಯ ಉಪನಿರ್ದೇಶಕಿ ಭಾಗ್ಯಮ್ಮ ಬಿ., ಸಕಾಲ ಸಲಹೆಗಾರ ವಿಶ್ವನಾಥ, ಐ.ಪಿ.ಜಿ.ಆರ್.ಎಸ್ ಕನ್ಸಲ್ಟಂಟ್ ಜಾಫರ್ ಭಾಗವಾನ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.