ADVERTISEMENT

ಅತಿಥಿ ಶಿಕ್ಷಕರಿಗೆ ಆಹಾರ ಧಾನ್ಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 3:46 IST
Last Updated 27 ಜೂನ್ 2021, 3:46 IST
ತಾವರಗೇರಾ ಪಟ್ಟಣದಲ್ಲಿ ಅತಿಥಿ ಶಿಕ್ಷಕರಿಗೆ ಆಹಾರ ಧಾನ್ಯದ ಕಿಟ್‌ ವಿತರಿಸಲಾಯಿತು
ತಾವರಗೇರಾ ಪಟ್ಟಣದಲ್ಲಿ ಅತಿಥಿ ಶಿಕ್ಷಕರಿಗೆ ಆಹಾರ ಧಾನ್ಯದ ಕಿಟ್‌ ವಿತರಿಸಲಾಯಿತು   

ತಾವರಗೇರಾ: ‘ಲಾಕ್‌ಡೌನ್‌ ಕಾರಣ ಅತಿಥಿ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಕೈಲಾದ ಸಹಾಯ ಮಾಡಬೇಕು ಎನ್ನುವ ಉದ್ದೇಶದಿಂದ ಸಂಸ್ಥೆ ವತಿಯಿಂದ ಆಹಾರ ಧಾನ್ಯದ ಕಿಟ್‌ ನೀಡಲಾಗುತ್ತಿದೆ’ ಎಂದು ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕಕ್ಕೇರಾ ಗ್ರಾಮದ ಸಂಕಲ್ಪ ಎಜುಕೇಷನಲ್ ಮತ್ತು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಚ್‌.ಎಸ್‌.ಪಾಟೀಲ ಹೇಳಿದರು.

ಪಟ್ಟಣ ಸೇರಿದಂತೆ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಶಾಲೆಗಳ ಅತಿಥಿ ಶಿಕ್ಷಕರಿಗೆ ಆಹಾರ ಧಾನ್ಯದ ಕಿಟ್‌ ವಿತರಿಸಿ ಮಾತನಾಡಿದರು.

ಟ್ರಸ್ಟ್‌ನ ಉಪಾಧ್ಯಕ್ಷ ಮಹಾಂತೇಶ ಸುಂಕದ ಮಾತನಾಡಿ,‘ಕೆಲಸವಿಲ್ಲದೆ ಮನೆಯಲ್ಲಿ ಖಾಲಿ ಕುಳಿತಿರುವ ಶಿಕ್ಷಕ ವೃಂದಕ್ಕೆ ಗುರು ನಮನ ಎಂಬ ಶೀರ್ಷಿಕೆ ಅಡಿ ಆಹಾರ ಧಾನ್ಯದ ಕಿಟ್ ವಿತರಿಸಲಾಗುತ್ತಿದೆ’ ಎಂದರು.

ADVERTISEMENT

ಮಹೇಶ ತೋಟದ್, ಶ್ಯಾಮಣ್ಣ ಕಿಲ್ಲಾರಹಟ್ಟಿ, ವೀರೇಶ ಕುಂಬಾರ ಸೇರಿ ಶಿಕ್ಷಕ, ಶಿಕ್ಷಿಯರು ಇದ್ದರು.

ನಂತರ 30ಕ್ಕೂ ಹೆಚ್ಚು ಅತಿಥಿ ಶಿಕ್ಷಕ, ಶಿಕ್ಷಕಿಯರಿಗೆ ಆಹಾರ ಧಾನ್ಯದ ಕಿಟ್‌ಗಳನ್ನು ವಿತರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.