ADVERTISEMENT

‘ಸಮಾಜದಲ್ಲಿ ಗುರುವಿನ ಪಾತ್ರ ಮುಖ್ಯ’

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 6:27 IST
Last Updated 13 ಏಪ್ರಿಲ್ 2021, 6:27 IST
ಅಳವಂಡಿ ಗ್ರಾಮದ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2012-–13ನೇ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು
ಅಳವಂಡಿ ಗ್ರಾಮದ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 2012-–13ನೇ ವಿದ್ಯಾರ್ಥಿಗಳಿಂದ ಗುರುವಂದನೆ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು   

ಅಳವಂಡಿ:ದೇಶದಲ್ಲಿ ಉತ್ತಮ ಪ್ರಜೆಗಳನ್ನು ನಿರ್ಮಿಸುವುದರಲ್ಲಿ ಹಾಗೂ ಪ್ರತಿಯೊಬ್ಬರಲ್ಲಿ ಒಳ್ಳೆಯ ಗುಣಗಳನ್ನು ಬೆಳೆಸುವುದರಲ್ಲಿ ಗುರುಗಳಲ್ಲಿ ಪಾತ್ರ ಅತ್ಯಂತ ಅಮೂಲ್ಯವಾಗಿದೆ ಎಂದು ಮಠದ ಮರುಳಾರಾಧ್ಯ ಶಿವಾಚಾರ್ಯಸ್ವಾಮೀಜಿ ಹೇಳಿದರು.

ಗ್ರಾಮದ ಸಿದ್ಧೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ 2012-13ನೇ ವಿದ್ಯಾರ್ಥಿಗಳಿಂದ ನಡೆದ ಗುರುವಂದನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮಕ್ಕೆ ಸಸಿಗಳನ್ನು ನೆಡುವ ಮೂಲಕ ಹಾಗೂ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಎ.ಟಿ.ಕಲ್ಮಠ ಅಧ್ಯಕ್ಷತೆ ವಹಿಸಿದ್ದರು.ಪ್ರಾಚಾರ್ಯ ಚಂದ್ರಶೇಖರ ದೊಡ್ಡಮನಿ, ಡಿ.ಜಿ.ಲಕ್ಕನಗೌಡರ, ಎಂ.ಎಸ್.ಹೊಟ್ಟಿನ, ಎಂ.ಎಸ್.ಕೊಪ್ಪಳ, ಎಚ್.ಯಲ್ಲಪ್ಫಗೌಡರ, ಪಂಪಯ್ಯ ಹಿರೇಮಠ, ಜಿ.ಜಿ.ಕುರಡಗಿ, ಪಿ.ವಿ.ಹಿರೇಮಠ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.