ಅಳವಂಡಿ: ಸಮೀಪದ ವದಗನಾಳ ಗ್ರಾಮದ ಆರಾಧ್ಯ ದೈವ ಹಮ್ಮಿಗೇಶ್ವರ ಜಾತ್ರಾ ಮಹೋತ್ಸವವು ಏಪ್ರಿಲ್ 12ರಿಂದ ಆರಂಭವಾಗಿದ್ದು 14 ವರೆಗೂ ನಡೆಯಲಿದೆ. ಶನಿವಾರ ವಿಶೇಷ ಪೂಜೆ, ಮಹಾ ರುದ್ರಾಭಿಷೇಕ, ಭಕ್ತರಿಂದ ದೀರ್ಘದಂಡ ನಮಸ್ಕಾರ ಹಾಗೂ ಸಂಜೆ ಲಘು ರಥೋತ್ಸವ ನಡೆಯಿತು.
ಏ.13ರ ಭಾನುವಾರ ಬೆಳಿಗ್ಗೆ ವಿಶೇಷ ಪೂಜೆ, ಅಭಿಷೇಕ, ಗ್ರಾಮದ ಉಮಾಶೇಶ್ವರ ಕಲ್ಯಾಣ ಮಂಟಪದಲ್ಲಿ ಜಾತ್ರೆಯ ನಿಮಿತ್ತ ಸಾಮೂಹಿಕ ವಿವಾಹ ಕಾರ್ಯಕ್ರಮ, ಧರ್ಮಸಭೆ, ಪಿಯಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಸಾಯಂಕಾಲ ರಥೋತ್ಸವ ಜರುಗಲಿದೆ. ತದನಂತರ ಶ್ರೀಗಳಿಂದ ಆರ್ಶೀವಚನ, ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಗ್ರಾಮದ ಕಲಾವಿದರಿಂದ ನಾಟಕ ಪ್ರದರ್ಶನ ನಡೆಯಲಿದೆ.
ಏ.14ರಂದು ಮಧ್ಯಾಹ್ನ ಹಳ್ಳಿ ಬಂಡಿ ಮೆರವಣಿಗೆ, ಮದ್ದು ಸುಡುವುದು ಹಾಗೂ ರಾತ್ರಿ 10 ಗಂಟೆಯಿಂದ ಮಂಗಳವಾರ ಬೆಳಿಗ್ಗೆ 6 ಗಂಟೆವರೆಗೂ ಡೊಳ್ಳು ಕುಣಿತ, ವಿವಿಧ ವಾದ್ಯ ಮೇಳದೊಂದಿಗೆ ಹಮ್ಮಿಗೇಶ್ವರ ಉತ್ಸವ ಮೂರ್ತಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಲಿದೆ. ಜಾತ್ರೆಯ ಪ್ರಯುಕ್ತ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.