ADVERTISEMENT

ಕಳ್ಳತನದ ಮಾಹಿತಿ ನೀಡದ ಮುಖ್ಯ ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 15:34 IST
Last Updated 29 ಆಗಸ್ಟ್ 2024, 15:34 IST
ರುದ್ರಗೌಡ
ರುದ್ರಗೌಡ   

ಯಲಬುರ್ಗಾ (ಕೊಪ್ಪಳ ಜಿಲ್ಲೆ): ಸ್ಥಳೀಯ ಸರ್ಕಾರಿ ಹಿರಿಯ ಪ್ರಾಥಮಿಕ ನಂ.1 ಶಾಲೆಯಲ್ಲಿ ಎರಡು ಚೀಲ ತೊಗರಿ ಬೇಳೆ ಕಳ್ಳತನವಾಗಿರುವ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡದೇ ನಿರ್ಲಕ್ಷಿಸಿದ್ದಾರೆ ಎಂಬ ಆರೋಪದ ಮೇಲೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಶಾಲೆಯ ಮುಖ್ಯ ಶಿಕ್ಷಕ ರುದ್ರಗೌಡ ಗೋಣಿ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ ಅಮಾನತು ಮಾಡಿದ್ದಾರೆ.

ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು ಶಾಲೆಗೆ ಭೇಟಿ ನೀಡಿ ಕಳ್ಳತನ ಆಗಿರುವ ಬಗ್ಗೆ ದೃಢಪಡಿಸಿದ್ದರು. ಆದರೂ ಈ ಬಗ್ಗೆ ಠಾಣೆಗೆ ದೂರು ನೀಡದೇ ನಿರ್ಲಕ್ಷಿಸಿದ್ದು ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಪರಿಗಣಿಸಿ ಕೆಸಿಎಸ್‍ಆರ್ ನಿಯಮಾವಳಿ ಪ್ರಕಾರ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT