ADVERTISEMENT

ಕೊಪ್ಪಳ | ಆರೋಗ್ಯ ಶಿಬಿರ: 395 ಜನರು ಭಾಗಿ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2025, 6:39 IST
Last Updated 19 ಸೆಪ್ಟೆಂಬರ್ 2025, 6:39 IST
ಕೊಪ್ಪಳದಲ್ಲಿ ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಸಂಸದ ರಾಜಶೇಖರ ಹಿಟ್ನಾಳ ಅವರು ಉದ್ಘಾಟಿಸಿದರು. ಕಂಪನಿಯ ಹಿರಿಯ ಅಧಿಕಾರಿಗಳು ಇದ್ದಾರೆ
ಕೊಪ್ಪಳದಲ್ಲಿ ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ಬುಧವಾರ ನಡೆದ ಆರೋಗ್ಯ ತಪಾಸಣಾ ಶಿಬಿರವನ್ನು ಸಂಸದ ರಾಜಶೇಖರ ಹಿಟ್ನಾಳ ಅವರು ಉದ್ಘಾಟಿಸಿದರು. ಕಂಪನಿಯ ಹಿರಿಯ ಅಧಿಕಾರಿಗಳು ಇದ್ದಾರೆ   

ಕೊಪ್ಪಳ: ತಾಲ್ಲೂಕಿನ ಬೇವಿನಹಳ್ಳಿಯ ಕಿರ್ಲೋಸ್ಕರ್ ಫೆರಸ್ ಕಂಪನಿಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಗರದ ಮಧುಶ್ರೀ ಗಾರ್ಡನ್‌ನಲ್ಲಿ ಬುಧವಾರ ಏರ್ಪಡಿಸಿದ್ದ ಶಿಬಿರದಲ್ಲಿ 395 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಕಿರ್ಲೋಸ್ಕರ್ ಗ್ರಾಮೀಣಾಭಿವೃದ್ಧಿ ಸಂಸ್ಥೆ, ಹುಬ್ಬಳ್ಳಿಯ ವಿಹಾನ್ ಹೃದಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಸ್ಥಳೀಯ ಕೆ.ಎಸ್. ಆಸ್ಪತ್ರೆ, ರೆಡ್ ಕ್ರಾಸ್ ಸಂಸ್ಥೆ, ಸರ್ವೋದಯ ಸಮಗ್ರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಶಿಬಿರವನ್ನು ಸಂಸದ ರಾಜಶೇಖರ ಹಿಟ್ನಾಳ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ‘ದೇಶದ ಅಭಿವೃದ್ಧಿಗೆ ಕೈಗಾರಿಕೆಗಳು ಅಗತ್ಯವಿದ್ದು, ಉದ್ಯೋಗ ಸೃಷ್ಟಿಯಾಗುತ್ತವೆ. ಕೈಗಾರಿಕೆಗಳು, ಮಾಲಿನ್ಯ ತಡೆಗೆ ಸುಧಾರಿತ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

ಕಂಪನಿ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ‌.ನಾರಾಯಣ ಮಾತನಾಡಿ, ‘ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಮ್ಮಿಕೊಂಡಿರುವ ಸಾಮಾಜಿಕ ಕಾರ್ಯಗಳ ಮಾಹಿತಿ ನೀಡಿದರು. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಆರ್.ವಿ.ಗುಮಾಸ್ತೆ ಮಾತನಾಡಿದರು.

ಇದೇ ಸಂದರ್ಭದಲ್ಲಿ 200 ಜನ ದಾನಿಗಳು ರಕ್ತದಾನ ಮಾಡಿದರು. ಹುಬ್ಬಳ್ಳಿಯ ವಿಹಾನ್ ಆಸ್ಪತ್ರೆಯ ವೈದ್ಯರು, ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಮಹಿಳಾ ಕ್ಲಬ್‌ನ ಸದಸ್ಯರು ಹಾಜರಿದ್ದರು. ಶಿವಯ್ಯಸ್ವಾಮಿ ಸ್ವಾಗತಿಸಿದರು. ರಮೇಶ ದೀಕ್ಷಿತ ನಿರೂಪಿಸಿದರು. ಉದ್ಧವ್ ಕುಲಕರ್ಣಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.