ADVERTISEMENT

ಯಲಬುರ್ಗಾ: ನರೇಗಾ ಕಾರ್ಮಿಕರ ಆರೋಗ್ಯ ತಪಾಸಣೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 14:13 IST
Last Updated 20 ಜೂನ್ 2025, 14:13 IST
ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು
ಯಲಬುರ್ಗಾ ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು   

ಯಲಬುರ್ಗಾ: ‘ಮಳೆಗಾಲದಲ್ಲಿ ವಿವಿಧ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುವುದರಿಂದ ಕಾಮಗಾರಿ ಸ್ಥಳದಲ್ಲಿಯೇ ಕಾರ್ಮಿಕರ ಆರೋಗ್ಯ ತಪಾಸಣೆಯ ಮೂಲಕ ಕಾರ್ಮಿಕರ ಹಿತ ಕಾಪಾಡುವುದು ಮುಖ್ಯ’ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೀರಭದ್ರಗೌಡ ಮೂಲಿಮನಿ ಹೇಳಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಧನಲಕ್ಷ್ಮಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ತಾಲ್ಲೂಕು ಪಂಚಾಯಿತಿ ನರೇಗಾ ಯೋಜನೆ ಅಡಿಯಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

200 ಅಕುಶಲ ಕಾರ್ಮಿಕರ ತಪಾಸಣೆ: ನಾಲಾ ಅಭಿವೃದ್ಧಿ ಕಾಮಗಾರಿ ನಿರ್ವಹಣೆ ವೇಳೆ ಸುಮಾರು 200ಕ್ಕು ಅಧಿಕ ಸಂಖ್ಯೆಯಲ್ಲಿ ಅಕುಶಲ ಕಾರ್ಮಿಕರ ಪಾಲ್ಗೊಂಡು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಈ ವೇಳೆ ಕಾರ್ಮಿಕರ ಬಿಪಿ, ಶುಗರ್, ಕೆಮ್ಮು, ನೆಗಡಿ ಹಾಗೂ ಜ್ವರವನ್ನು ತಪಾಸಣೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.

ADVERTISEMENT

ಈ ವೇಳೆ ಎನ್‍ಆರ್‌ಎಲ್‍ಎಂ ತಾಲ್ಲೂಕು ಸಂಯೋಜಕ ಉದಯಕುಮಾರ, ಐಇಸಿ ಸಂಯೋಜಕ ಶರಣಪ್ಪ ಹಾಳಕೇರಿ, ಕಾರ್ಯದರ್ಶಿ ಹುಲಗಪ್ಪ, ವಿಆರ್‌ಡಬ್ಲೂ ವೀರಭದ್ರಪ್ಪ ನಡಗುಂದಿ, ಡಿಇಒ ಮೈಲಾರಿ, ಬಿಎಫ್‍ಟಿ ಗುರುಬಸಯ್ಯ ಮಠಪತಿ, ಕರವಸೂಲಿಗಾರ ಕರಸಿದ್ದಪ್ಪ ತಮ್ಮಿನಾಳ, ಪಶುಸಖಿ ಶಿವಲೀಲಾ ದೇವಕ್ಕಿ, ಕೃಷಿ ಸಖಿ ವೀರಮ್ಮ ಮಂಡಲಗೇರಿ, ಒಕ್ಕೂಟದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.