ಕೊಪ್ಪಳ: ರಾಜ್ಯ ವಿಧಾನ ಪರಿಷತ್‌ಗೆ ವಿಧಾನಸಭೆಯಿಂದ ಬಿಜೆಪಿ ಅಭ್ಯರ್ಥಿಯಾಗಿ ಇಲ್ಲಿನ ವಕೀಲೆ, ಮಹಿಳಾ ಪ್ರಧಾನ ಕಾರ್ಯದರ್ಶಿ, ವಕೀಲೆ ಹೇಮಲತಾ ನಾಯಕ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.
ಜಿಲ್ಲೆಯಲ್ಲಿ ಪಕ್ಷ ಕಟ್ಟುವಲ್ಲಿ ದುಡಿದ ಅವರ ಶ್ರಮವನ್ನು ಗುರುತಿಸಿದ ಪಕ್ಷದ ವರಿಷ್ಠರು ಟಿಕೆಟ್ ನೀಡಿದ್ದಾರೆ.
ನಾಮಪತ್ರ ಸಲ್ಲಿಸಲು ವಿಶೇಷ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಿದ್ದು ಕಮಲ ಪಾಳಯದಲ್ಲಿ ಉತ್ಸಾಹ ಮೂಡಿಸಿದೆ.
ಮಹಿಳಾ ಮುಖಂಡರಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿ ಭಾಗ್ಯನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ್ದಾರೆ.
ಬಿಜೆಪಿ ಮುಖಂಡರು ನಾಯಕ ಅವರನ್ನು ಉತ್ಸಾಹದಿಂದ ಸ್ವಾಗತಿಸಿ ಮೆರವಣಿಗೆ ಮೂಲಕ ಬೆಂಗಳೂರಿಗೆ ಕಳುಹಿಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.