ADVERTISEMENT

ಕೊಪ್ಪಳ ನಗರಸಭೆ ಆಡಳಿತಾವಧಿ ವಿಸ್ತರಣೆಗೆ ಕೋರಿ ಪಟೇಲ್‌ ಸಲ್ಲಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2025, 7:31 IST
Last Updated 17 ಡಿಸೆಂಬರ್ 2025, 7:31 IST
ತೀರ್ಪು
ತೀರ್ಪು   

ಕೊಪ್ಪಳ: ಇಲ್ಲಿನ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಬೇಕು ಎಂದು ಅಧ್ಯಕ್ಷ ಅಮ್ಜದ್‌ ಪಟೇಲ್‌ ಅವರು ಧಾರವಾಡ ಹೈಕೋರ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದರಿಂದಾಗಿ ಅವರ ಅಧಿಕಾರವಧಿ ಮುಗಿದಿದ್ದು, ಆಡಳಿತಾಧಿಕಾರಿಯನ್ನು ನೇಮಿಸಲಾಗುತ್ತದೆ.

ಈ ಸಲದ ನಗರಸಭೆ ಆಡಳಿತವು 2021ರ ಏಪ್ರಿಲ್‌ 27ರಂದು ಮೊದಲ ಬಾರಿಗೆ ನಡೆದಿತ್ತು. ಆದ್ದರಿಂದ 2026ರ ಏಪ್ರಿಲ್‌ 26ರ ತನಕ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ಕೊಡಬೇಕು ಎಂದು ನ್ಯಾಯಾಲಯದ ಮೊರೆ ಹೋಗಿದ್ದರು. ಮಂಗಳವಾರ ನ್ಯಾಯಾಲಯ ಅವರ ಅರ್ಜಿಯನ್ನು ತಿರಸ್ಕರಿಸಿದ್ದು, ಮುಂದಿನ ಚುನಾವಣೆಯ ಹಾದಿ ಸುಗಮವಾಗಿದೆ.

ಕೊಪ್ಪಳ ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳಿಗೆ ಈಗಾಗಲೇ ಮೀಸಲಾತಿ ಘೋಷಣೆ ಮಾಡಲಾಗಿದ್ದು, ಆಕ್ಷೇಪಣೆಗಳು ಕೂಡ ಸಲ್ಲಿಕೆಯಾಗಿವೆ. ಅವುಗಳ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಈ ಎಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ಸ್ಥಳೀಯ ಸಂಸ್ಥೆಗೆ ಚುನಾವಣಾ ಪ್ರಕ್ರಿಯೆ ಆರಂಭವಾಗಲಿವೆ ಎಂದು ಮೂಲಗಳು ತಿಳಿಸಿವೆ.

ADVERTISEMENT

33 ವರ್ಷಗಳ ಬಳಿಕ ಇಲ್ಲಿಗೆ ನಗರಸಭೆಗೆ ಅಲ್ಪಸಂಖ್ಯಾತ ಸಮುದಾಯದ ಅಮ್ಜದ್ ಪಟೇಲ್‌ ಅವರು ಅಧ್ಯಕ್ಷರಾಗಿದ್ದರು. ಪೂರ್ಣ 30 ತಿಂಗಳು ಆಡಳಿತ ನಡೆಸಲು ಅವಕಾಶ ಕೊಡುವಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ಅವರು 2024ರ ಆಗಸ್ಟ್‌ನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.