ಕೊಪ್ಪಳ: ನಗರದ ಎಸ್‌ಎಫ್‌ಎಸ್ ಶಾಲೆಯ ವಿದ್ಯಾರ್ಥಿಗಳು ಐಸಿಎಸ್‌ಸಿ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿದೆ.
ಇತ್ತೀಚೆಗೆ 2023-24 ನೇ ಸಾಲಿನ ಐಸಿಎಸ್‌ಸಿ ಮಂಡಳಿಯು ಫಲಿತಾಂಶ ಪ್ರಕಟಿಸಿದ್ದು, ಪರೀಕ್ಷೆ ಎದುರಿಸಿದ ಶಾಲೆಯ ಎಲ್ಲ 68 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಶಾಲೆ ಸತತ 11ನೇ ವರ್ಷ ಶೇ. 100ರಷ್ಟು ಫಲಿತಾಂಶ ಪಡೆದುಕೊಳ್ಳುತ್ತಿರುವುದು ವಿಶೇಷ.
56 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಗೌತಮಿ ಯತ್ನಟ್ಟಿ (ಶೇ. 98) ಜಿಲ್ಲೆಗೆ ಮೊದಲ ಸ್ಥಾನ ಪಡೆದಿದ್ದಾಳೆ. ದಿಶಾ ತಂಬ್ರಳ್ಳಿ (ಶೇ. 97.8) ಶಾಲೆಗೆ ದ್ವಿತೀಯ ಮತ್ತು ಆಶಿಶ್ ಜಿ ಚಂಡಕ್ (ಶೇ. 96.8) ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. 34 ವಿದ್ಯಾರ್ಥಿಗಳು ಶೇ. 90ಕ್ಕಿಂತಲೂ ಅಧಿಕ ಅಂಕಗಳನ್ನು ಗಳಿಸಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲ ಫಾದರ್ ಜಬಮಲೈ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.