ಗಂಗಾವತಿ: ನಗರದ ಚಂದ್ರಹಾಸ ಚಿತ್ರಮಂದಿರ ಸಮೀಪದ ಕಿಲ್ಲಾ ಏರಿಯಾ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
‘ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದ್ದು, ಗೋದಾಮಿಯಲ್ಲಿ ಪಡಿತರ ಅಕ್ಕಿ ಪತ್ತೆಯಾಯಿತು. 25 ಕೆ.ಜಿ.ತೂಕದ 41 ಮೂಟೆಗಳಿದ್ದು, ಅಂದಾಜು 10.25 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ಆಹಾರ ಇಲಾಖೆ ನಿರೀಕ್ಷಕಿ ನಾಗರತ್ನ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.