ಗಂಗಾವತಿ (ಕೊಪ್ಪಳ ಜಿಲ್ಲೆ): ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಜಿಲ್ಲಾಡಳಿತ ತಾಲ್ಲೂಕಿನ ವಿರೂಪಾಪುರ ಗಡ್ಡೆಯಲ್ಲಿನ ಅಕ್ರಮ ರೆಸಾರ್ಟ್‌ಗಳ ತೆರವು ಕಾರ್ಯಾಚರಣೆಯನ್ನು ಮಂಗಳವಾರ ಆರಂಭಿಸಿತು.
ಇಲ್ಲಿ 60ಕ್ಕೂ ಹೆಚ್ಚು ರೆಸಾರ್ಟ್‌ಗಳು ಇವೆ ಎನ್ನಲಾಗುತ್ತಿದ್ದು, 18ಕ್ಕೂ ಹೆಚ್ಚು ರೆಸಾರ್ಟ್‌ಗಳನ್ನು ಮಂಗಳವಾರ ತೆರವುಗೊಳಿಸಲಾಯಿತು. 3 ರೆಸಾರ್ಟ್ ಮಾಲೀಕರು ತೆರವಿಗೆ ತಡೆಯಾಜ್ಞೆ ತಂದಿದ್ದಾರೆ. ಪ್ರಕರಣ ಹೈಕೋರ್ಟ್‌ನ ಧಾರವಾಡ ಪೀಠದಲ್ಲಿ ಇರುವುದರಿಂದ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.
ತೆರವುಮುನ್ಸೂಚನೆ ಇದ್ದ ಕಾರಣ ಹೆಚ್ಚಿನ ಪ್ರವಾಸಿಗರು ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.