ಕುಕನೂರು: ‘ಕಡಿಮೆ ದರದಲ್ಲಿ ಆಹಾರ ವಿತರಿಸುವ ಇಂದಿರಾ ಕ್ಯಾಂಟೀನ್ ಬಡವರಿಗೆ ವರದಾನವಾಗಿದೆ’ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದರು.
ಪಟ್ಟಣದ ಎಪಿಎಂಸಿ ಆರಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.
‘ಬಡಜನತೆಗೆ ಅದರಲ್ಲೂ ವಿದ್ಯಾರ್ಥಿಗಳು, ಕೂಲಿ, ಕಾರ್ಮಿಕರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸಲು ಇಂದಿರಾ ಕ್ಯಾಂಟೀನ್ ಸಹಾಯಕವಾಗಲಿದೆ. ಕ್ಯಾಂಟೀನ್‌ನಲ್ಲಿ ಗುಣಮಟ್ಟದ ಆಹಾರ ಪೂರೈಕೆ ಜತೆಗೆ ಸ್ವಚ್ಛತೆಗೆ ಆದ್ಯತೆ ನೀಡಲು ಸೂಚಿಸಲಾಗಿದೆ’ ಎಂದು ಹೇಳಿದರು.
ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ರಾಯರಡ್ಡಿ ಅವರು ಕ್ಯಾಂಟೀನ್‌ನಲ್ಲಿ ಸಾರ್ವಜನಿಕರೊಂದಿಗೆ ಉಪಾಹಾರ ಸೇವಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ರಮೇಶ್ ಯಡಿಯಾಪುರ, ಉಪಾಧ್ಯಕ್ಷ ಪ್ರಶಾಂತ್ ಆರ್. ಬೆರಳಿನ, ಮಂಜುನಾಥ್ ಕಡೆಮನಿ, ಸಂಗಮೇಶ್ ಗುತ್ತಿ, ಕಾಶಿಂ ಸಾಬ್ ತಳಕಲ್, ಸತ್ಯನಾರಾಯಣಪ್ಪ ಹರಪನಹಳ್ಳಿ, ನಾಗವೇಣಿ, ತಹಶೀಲ್ದಾರ್ ಪ್ರಾಣೇಶ್ ಎಚ್, ತಾ.ಪಂ. ಇಒ ಸಂತೋಷ್ ಬಿರಾದಾರ, ಪಿಎಸ್ಐ ಗುರುರಾಜ್ ಟಿ, ಪ.ಪಂ ಮುಖ್ಯ ಅಧಿಕಾರಿ ರವೀಂದ್ರ ಬಾಗಲಕೋಟೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.