ಗಂಗಾವತಿ: ತಾಲ್ಲೂಕಿನ ಬಸಾಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಕೂಲಿಕಾರರು ನಿರ್ವಹಿಸುತ್ತಿರುವ ವಿಠಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಮಹಾಂತಗೌಡ ಪಾಟೀಲ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಅವರು ಮಾತನಾಡಿದ ಅವರು,' ಕೂಲಿಕಾರರು ಅಳತೆ ಪ್ರಕಾರ ಕೆಲಸ ನಿರ್ವಹಿಸಬೇಕು. ಗ್ರಾ.ಪಂ ಸಿಬ್ಬಂದಿ ದಿನಕ್ಕೆ ಎರಡು ಬಾರಿ ಎನ್‌ಎಂಎಂಎಸ್ ಹಾಜರಾತಿ ಪಾರದರ್ಶಕವಾಗಿ ಹಾಕಬೇಕು. ಕೆರೆ ಹೂಳೆತ್ತುವುದರಿಂದ ಅಂತರ್ಜಲ ವೃದ್ಧಿ ಆಗಲಿದ್ದು, ಇದರಿಂದ ಸಹ ಬೋರ್‌ವೆಲ್ ರಿಚಾರ್ಜ್ ಆಗಿ ಕುಡಿಯುವ ನೀರಿಗೆ ಮತ್ತು ರೈತರ ಬೆಳೆಗಳಿಗೆ ಸಹಕಾರಿ ಆಗಲಿದೆ ಎಂದರು.
ದುಡಿಯೋಣ ಬಾ ಅಭಿಯಾನ ಹಾಗೂ ಸ್ತ್ರೀ ಚೇತನ ಅಭಿಯಾನ ಶುರುವಾಗಿದ್ದು, ಕೂಲಿಕಾರರು ಗ್ರಾಮ ಪಂಚಾಯಿತಿಗೆ ಕೆಲಸದ ಬೇಡಿಕೆ ಸಲ್ಲಿಸಿ, ಕೆಲಸ ಪಡೆಯಬೇಕು. ಉದ್ಯೋಗ ಖಾತರಿ ಯೋಜನೆಯಡಿ ವರ್ಷಕ್ಕೆ 100 ಮಾನವ ದಿನಗಳ ಕೆಲಸ ಮಾಡಲು ಅವಕಾಶವಿದ್ದು, ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಬಸಾಪಟ್ಟಣ ಪಿಡಿಒ ವಿದ್ಯಾವತಿ ತಾಲ್ಲೂಕು ಐಇಸಿ ಸಂಯೋಜಕ ಬಾಳಪ್ಪ ತಾಳಕೇರಿ, ತಾಂತ್ರಿಕ ಸಂಯೋಜಕ ಬಸವರಾಜ ಜಟಗಿ, ತಾಂತ್ರಿಕ ಸಹಾಯಕ ಲೀಲಾವತಿ, ಗ್ರಾ.ಪಂ ಸಿಬ್ಬಂದಿ ಬೆಟ್ಟಪ್ಪ, ಬಿಎಫ್‌ಟಿ ಹನುಮೇಶ ಸೇರಿ ಕಾಯಕಬಂಧುಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.