ಕುಕನೂರು: ‘ತಾಲ್ಲೂಕಿನ ಕವಳಕೇರಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾಕಿ ಅವಮಾನಿಸಿದವರಿಗೆ ಕಠಿಣ ಶಿಕ್ಷೆ ಗುರಿಪಡಿಸಬೇಕು’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆಗ್ರಹಿಸಿದ್ದಾರೆ.
ಘಟನೆ ಕುರಿತು ಹೇಳಿಕೆ ನೀಡಿರುವ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನಿಸುವುದು ತಪ್ಪು. ಅವರು ಇಡೀ ಭಾರತೀಯರು ಆರಾಧಿಸುವ ಶಕ್ತಿ. ಅಂತವರಿಗೆ ಅವಮಾನ ಮಾಡಿರುವ ಘಟನೆ ಖಂಡನೀಯ. ಕಿಡಿಗೇಡಿಗಳಿಗೆ ಕಾನೂನಾತ್ಮಕವಾಗಿ ಶಿಕ್ಷೆ ಆಗಬೇಕು. ಕಾನೂನು ಇಂತಹ ಅಮಾನುಷ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಬೇಕು. ಅಂಬೇಡ್ಕರ್ ಅವರನ್ನು ಆರಾಧಿಸುವ ಕಾರ್ಯ ಆಗಬೇಕೆ ಹೊರತು ಅವಮಾನಿಸುವ ಕಾರ್ಯ ಎಂದಿಗೂ ಆಗಬಾರದು ಎಂದರು.
ಡಾ.ಬಿ.ಆರ್ ಅಂಬೇಡ್ಕರ್ ಅವರು ಸಮಾನತೆ ನೀಡಿದವರು. ಸಮ ಸಮಾಜಕ್ಕೆ ಶ್ರಮಿಸಿದವರು. ಮಾನವೀಯ ಮೌಲ್ಯ ಮರೆತು ಕವಳಕೇರಿಯಲ್ಲಿ ಕಿಡಿಗೇಡಿಗಳು ಮಾಡಿರುವ ಅವಮಾನ ಸರಿಯಲ್ಲ. ಇಂತಹ ಘಟನೆ ಜರುಗದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.