ಸ್ಪರ್ಧೆ ಪೂರ್ಣಗೊಳಿಸಿದ ಖುಷಿಯಲ್ಲಿ ಕಾವ್ಯ ಎನ್. –ಪ್ರಜಾವಾಣಿ ಚಿತ್ರಗಳು/ಭರತ್ ಕಂದಕೂರ
ಕೊಪ್ಪಳ: ಬಳ್ಳಾರಿಯ ಎಎಸ್‌ಎಂ ಕಾಲೇಜಿನ ಕಾವ್ಯ ಎನ್. ನಗರದಲ್ಲಿ ಶನಿವಾರ ಬೆಳಗ್ಗೆ ನಡೆದ ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ನಡುವಿನ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರು.
ಇಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆರಂಭವಾದ ಸ್ಪರ್ಧೆಗೆ ಒಟ್ಟು ಹತ್ತು ಕಿ.ಮೀ. ಗುರಿ ನಿಗದಿ ಮಾಡಲಾಗಿತ್ತು. ಕಾವ್ಯಾ 46 ನಿಮಿಷದಲ್ಲಿ ಗುರಿ ತಲುಪಿ ಮೊದಲಿಗರಾದರು.
ಹುಬ್ಬಳ್ಳಿಯ ಎಸ್‌ಜೆಎಂವಿಎಸ್ ಕಾಲೇಜಿಯ ತನಿಷಾ ಇಂದರಗಿ (49 ನಿಮಿಷ), ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಭೂಮಿಕಾ (53ನಿ.18ಸೆ.), ಧಾರವಾಡದ ಕೆ.ಎಸ್. ಜಗಳೂರು ಕಾಲೇಜಿನ ಅನುಪ್ರಭಾ (53ನಿ. 36ಸೆ.), ಬೀದರ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಲ್ಪಾ (55ನಿ, 50ಸೆ.) ಮತ್ತು ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಗೀತಾ (56ನಿ.30ಸೆ.) ಕ್ರಮವಾಗಿ ನಂತರದ ಐದು ಸ್ಥಾನಗಳನ್ನು ಪಡೆದುಕೊಂಡರು.
ರಾಜ್ಯದ ವಿವಿಧೆಡೆಯಿಂದ ಎಂಟು ಕಾಲೇಜುಗಳಿಂದ 36 ಜನ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಇದರಲ್ಲಿ ಮೊದಲ ಆರು ಸ್ಥಾನಗಳನ್ನು ಪಡೆದ ಕ್ರೀಡಾಪಟುಗಳು ಮುಂಬರುವ ಅಂತರ ವಾರ್ಸಿಟಿ ಕ್ರೀಡಾಕೂಟಕ್ಕೆ ಪಾಲ್ಗೊಳ್ಳಲು ಅರ್ಹತೆ ಗಿಟ್ಟಿಸಿದರು.
ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಮೊದಲ ಆರು ಸ್ಥಾನ ಪಡೆದವರು. ಎಡದಿಂದ; ಕಾವ್ಯ ಎನ್., ತನಿಷಾ ಇಂದರಗಿ, ಭೂಮಿಕಾ, ಅನುಪ್ರಭಾ, ಶಿಲ್ಪಾ ಹಾಗೂ ಸಂಗೀತಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.