ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿಂದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ, ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್ ಫೋನ್ ರಿಪೇರಿ, ಸರ್ವಿಸಿಂಗ್ ಕುರಿತು ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತ ಗ್ರಾಮೀಣ ಭಾಗದ ನಿರುದ್ಯೋಗಿ ಯುವಜನತೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
18ರಿಂದ 45 ವಯೋಮಾನದ ನಿರುದ್ಯೋಗಿ ಯುವಜನತೆಗೆ ಆಗಸ್ಟ್‌ನಲ್ಲಿ ತರಬೇತಿ ನೀಡಲಾಗುತ್ತದೆ. ತರಬೇತಿಗಳು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ. ಹೆಸರು ನೋಂದಾಯಿಸಲು ಜು. 25 ಕೊನೆಯ ದಿನವಾಗಿದ್ದು, ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ, ಆರ್‌ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ವಿಳಾಸಕ್ಕೆ ಅಥವಾ 8217236973, 9844796998 ಸಂಪರ್ಕಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.