ADVERTISEMENT

12 ರಂದು ಸಲಹಾ ಸಮಿತಿ ಸಭೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 4:10 IST
Last Updated 10 ಜುಲೈ 2021, 4:10 IST

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಮುಂಗಾರು ಹಂಗಾಮಿಗೆ ಒದಗಿಸುವ ಕುರಿತು ನಿರ್ಣಯಿಸಲು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 115ನೇ ನೀರಾವರಿ ಸಲಹಾ ಸಮಿತಿ ಸಭೆ ಜು.12 ರಂದು ಬೆಳಿಗ್ಗೆ 11 ಗಂಟೆಗೆ ಮುನಿರಾಬಾದ್‌ನ ಕಾಡಾ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಮೂಲಸೌಕರ್ಯ, ಹಜ್ ಮತ್ತು ವಕ್ಫ್ ಖಾತೆ ಸಚಿವ ಆನಂದ್ ಸಿಂಗ್ ಅಧ್ಯಕ್ಷತೆ ವಹಿಸುವರು.

ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಸಂಸದರು, ಸಚಿವರು, ರಾಜ್ಯಸಭಾ ಸದಸ್ಯರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಹಾಗೂ ನೀರಾವರಿ ಸಲಹಾ ಸಮಿತಿ ಸದಸ್ಯರು ಸಭೆಯಲ್ಲಿ ಭಾಗವಹಿಸಿ ಅಗತ್ಯ ಸಲಹೆ ಸೂಚನೆ ನೀಡಬೇಕು ಎಂದು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.