ADVERTISEMENT

ಮಕ್ಕಳಿಗೆ ಕೊರೊನಾ ಸೋಂಕು: ಆದೇಶ ಪ್ರತಿ ನೀಡಿ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 11:12 IST
Last Updated 2 ಜೂನ್ 2021, 11:12 IST

ಕನಕಗಿರಿ: ‘ಮಕ್ಕಳಿಗೆ ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮನೆ ಮನೆ ಸಮೀಕ್ಷಾ ಕಾರ್ಯಕ್ಕೆ ಚಾಲನೆ ನೀಡಿದೆ. ಈ ಕೆಲಸಕ್ಕೆ ಅಧಿಕೃತ ಆದೇಶ ನೀಡದೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ’ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ ತಿಳಿಸಿದ್ದಾರೆ.

ಮನೆ ಮನೆ ಸಮೀಕ್ಷೆ ಕುರಿತು ಅಧಿಕಾರಿಗಳು ಆನ್‌ಲೈನ್‌ನಲ್ಲಿ ಚರ್ಚೆ ಮಾಡಿ ಸಮೀಕ್ಷೆ ಮಾಡಿ ಎಂದು ಸೂಚನೆ ನೀಡಿದ್ದಾರೆ. ಅಧಿಕೃತ ಆದೇಶ ಹೊರಡಿಸಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಮೀಕ್ಷೆ ಮಾಡಲು ಶಿಕ್ಷಕರಿಗೆ ಅಧಿಕೃತ ಆದೇಶ ಪ್ರತಿ ನೀಡಬೇಕು ಎಂದು ಅವರು ಪ್ರಕಟಣೆ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT