ಗಂಗಾವತಿ: ನಗರದ ಅಂಬೇಡ್ಕರ್ ವೃತ್ತದ ಸಮೀಪದ ಕೊಟ್ಟೂರು ಬಸವೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಬಸವೇಶ್ವರ ರಥೋತ್ಸವವು ಗುರುವಾರ ಅಪಾರ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.
ಜಾತ್ರೆಯ ನಿಮಿತ್ತ ಬೆಳಿಗ್ಗೆ ಕೊಟ್ಟೂರು ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು.
ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂತರ 11 ಗಂಟೆಯ ಸುಮಾರು ರಥಕ್ಕೆ ಪಟ ಏರಿಸಿ, ಮಡಿ ರಥೋತ್ಸವ ನಡೆಸಲಾಯಿತು. ಸಂಜೆ 5ರ ನಂತರ ಸಕಲ-ವಾದ್ಯಗಳ ನಡುವೆ ಜನಸ್ತೋಮದ ಸಮ್ಮುಖದಲ್ಲಿ ಸಂಭ್ರಮದ ರಥೋತ್ಸವ ನಡೆಯಿತು. ಭಕ್ತರು ರಥಕ್ಕೆ ಉತ್ತತ್ತಿ ಎಸೆದು, ಆರಕೆ ಹೊತ್ತು, ರಥಕ್ಕೆ ಕೈ ಮುಗಿದರು. ರಥೋತ್ಸವದಲ್ಲಿ ದೇವಸ್ಥಾನ ಸಮಿತಿ ಸದಸ್ಯರು, ಜನಪ್ರತಿನಿಧಿಗಳು, ಭಕ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.