ADVERTISEMENT

ಜೆಡಿಎಸ್‌: ಅಣ್ಣ ತೊರೆದ, ತಮ್ಮ ಸೇರಿದ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2023, 19:22 IST
Last Updated 30 ಮಾರ್ಚ್ 2023, 19:22 IST
ಎಚ್.ಆರ್ ಚೆನ್ನಕೇಶವ
ಎಚ್.ಆರ್ ಚೆನ್ನಕೇಶವ   

ಗಂಗಾವತಿ (ಕೊಪ್ಪಳ ಜಿಲ್ಲೆ): ಇಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ, ಮಾಜಿ ಸಂಸದ ಎಚ್.ಜಿ ರಾಮುಲು ಅವರ ಪುತ್ರ ಹಾಗೂ ಬಿಜೆಪಿ ಮುಖಂಡ ಎಚ್.ಆರ್ ಚೆನ್ನಕೇಶವ ಅವರು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.

ಎಚ್.ಆರ್ ಚೆನ್ನಕೇಶವ ಕಳೆದ ಬಾರಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಪಡೆಯಲು ವಿಫಲವಾದರು. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದರು. ಈಗ ದಿಢೀರನೇ ಜೆಡಿಎಸ್ ಸೇರಿ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಎಚ್.ಆರ್ ಚೆನ್ನಕೇಶವ ಅವರ ಅಣ್ಣ ಎಚ್.ಆರ್.ಶ್ರೀನಾಥ ಕೆಲ ತಿಂಗಳ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಈಗ ಚೆನ್ನಕೇಶವ ಜೆಡಿಎಸ್‌ ಸೇರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.