
ಕೊಪ್ಪಳ: ‘ನೆರೆ ರಾಷ್ಟ್ರಗಳಲ್ಲಿ ದಂಗೆಗಳಿಂದಾಗಿ ಆಡಳಿತ ವ್ಯವಸ್ಥೆ ಕುಸಿದರೂ ಭಾರತದಲ್ಲಿ ಆಡಳಿತ ವ್ಯವಸ್ಥೆ ಸುಭದ್ರವಾಗಿರುವುದಕ್ಕೆ ಕಾರಣ ಬಿ ಆರ್ ಅಂಬೇಡ್ಕರ್ ಅವರ ನೇತೃತ್ವದ ತಜ್ಞರು ಕೊಟ್ಟ ಸಂವಿಧಾನ’ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್ ಹೇಳಿದರು.
ಜೆಡಿಎಸ್ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದಲ್ಲಿ ಮಾತನಾಡಿ ‘ವಿಶ್ವದಲ್ಲಿಯೇ ಅತ್ಯಂತ ಸದೃಢ ಸಂವಿಧಾನ ಹೊಂದಿದ ಏಕೈಕ ರಾಷ್ಟ್ರ ಭಾರತ. ಕಾಂಗ್ರೆಸ್ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿ ಹಾಗೂ ಸಂವಿಧಾನದ 356ನೇ ವಿಧಿಯನ್ನು 90ಕ್ಕಿಂತಲೂ ಹೆಚ್ಚು ಸಲ ದುರ್ಬಳಕೆ ಮಾಡಿದೆ. ಕಾಂಗ್ರೆಸ್ ನಾಯಕರು ತಮ್ಮ ಪಕ್ಷದ ಪ್ರಮಾದಕ್ಕಾಗಿ ಈಗಲಾದರೂ ದೇಶದ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ ಸಂವಿಧಾನ ಪೀಠಿಕೆ ಓದಿದರು. ಪಕ್ಷದ ಒಬಿಸಿ ಜಿಲ್ಲಾಧ್ಯಕ್ಷ ಕರಿಯಪ್ಪ ಹಾಲವರ್ತಿ, ಜಿಲ್ಲಾ ಸಂಸ್ಕೃತಿ ವಿಭಾಗದ ಅಧ್ಯಕ್ಷ ಮಂಜುನಾಥ್, ಎಸ್ ಟಿ ಮೋರ್ಚಾ ವಿಭಾಗದ ಜಿಲ್ಲಾಧ್ಯಕ್ಷ ರಮೇಶ್ ಡಂಬ್ರಳ್ಳಿ, ಮುಖಂಡರಾದ ವೀರೇಶಗೌಡ್ರು ದಳಪತಿ, ಸೋಮನಗೌಡ, ನಿರ್ಮಲ ಎನ್ ಮೇದಾರ್, ಮುಖಂಡರಾದ ವಸಂತಕುಮಾರ್ ಹಟ್ಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.