ಕೊಪ್ಪಳ: ಕಲಬುರಗಿಯಲ್ಲಿ ಏ. 16ರಂದು ಆಯೋಜನೆಯಾಗಿರುವ ವಿಭಾಗೀಯ ಮಟ್ಟದ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಉದ್ಯೋಗಾಂಕ್ಷಿಗಳಿಗೆ ಅನುಕೂಲ ಕಲ್ಪಿಸಲು ಜಿಲ್ಲೆಯ ವಿವಿಧೆಡೆಯಿಂದ ಬಸ್ ಸೌಲಭ್ಯ ಕಲ್ಪಿಸಲಾಗಿದೆ.
ಕುಷ್ಟಗಿ, ಗಂಗಾವತಿ, ಕುಕನೂರು, ಯಲಬುರ್ಗಾ ಮತ್ತು ಕೊಪ್ಪಳ ಭಾಗದಿಂದ ಹೆಚ್ಚುವರಿ ಬಸ್ಸುಗಳ ಸೌಕರ್ಯಗಳನ್ನು ಎಪ್ರಿಲ್ 15ರಿಂದ 16ರ ವರೆಗೆ ಇರಲಿವೆ. ಸಾರ್ವಜನಿಕರು ಹಾಗೂ ಪ್ರಯಾಣಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ವಿಭಾಗದ ಹಿರಿಯ ನಿಯಂತ್ರಣಾಧಿಕಾರಿ ಮಹಾದೇವ ಮುಂಜಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.