ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಇತ್ತೀಚೆಗೆ ಇಲ್ಲಿನ ಕಾಳಿದಾಸ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಮಾತನಾಡಿ ‘ಪ್ರತಿ ವರ್ಷ ಜೂನ್‌ನಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಆಚರಿಸಲಾಗುತ್ತದೆ. ಮಳೆಗಾದಲ್ಲಿ ನಿಂತ ನೀರಿನಲ್ಲಿ ಸೋಂಕಿತ ಸೊಳ್ಳೆಗಳು ಹೆಚ್ಚಾಗಿ ಮನುಷ್ಯರಿಗೆ ಒಬ್ಬರಿಂದ ಇನ್ನೊಬ್ಬರಿಗೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ. ಇದರ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ನಮ್ಮ ಉದ್ದೇಶವಾಗಿದೆ’ ಎಂದು ಹೇಳಿದರು.
ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಕಾಂತ ಎಚ್.ಎಚ್., ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಿಂಕ್‌ವರ್ಕರ್ ಉದಯ, ಮುಖ್ಯೋಪಾಧ್ಯಾಯ ಡಾ. ರಾಮಪ್ಪ, ಸಹ ಶಿಕ್ಷಕ ಎಸ್.ಡಿ ಕುಲಕರ್ಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.