ADVERTISEMENT

ಕನಕಗಿರಿ: ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 11:10 IST
Last Updated 17 ಸೆಪ್ಟೆಂಬರ್ 2021, 11:10 IST
ಕನಕಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಕಲ್ಯಾಣ ಉತ್ಸವ ಆಚರಿಸಲಾಯಿತು
ಕನಕಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ಕಲ್ಯಾಣ ಉತ್ಸವ ಆಚರಿಸಲಾಯಿತು   

ಕನಕಗಿರಿ: ಪಟ್ಟಣದ ವಿವಿಧ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಶುಕ್ರವಾರ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢ ಶಾಲೆಯಲ್ಲಿ ಪ್ರಭಾರ ಪ್ರಾಂಶುಪಾಲ ಮಾರೆಪ್ಪ ಹಾಗೂ ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ಅವರು ಧ್ವಜಾರೋಹಣ ನೆರವೇರಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿರ್ದೇಶಕ ದಾದಪೀರ, ಪಿಯು ಕಾಲೇಜು ಉಪನ್ಯಾಸಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಇಮಾಮಸಾಹೇಬ್ ಹಡಗಲಿ, ಶಿಕ್ಷಕರಾದ ಸೈಫುಲ್, ಶಂಕ್ರಪ್ಪ ಸೋಮನಕಟ್ಟಿ, ತಿಪ್ಪಮ್ಮ, ಶಾಮೀದಸಾಬ, ಪ್ರಭುಲಿಂಗ, ಮಂಜುಳಾ ಮೇಟಿ ಹಾಗೂ ಜಿ.ಎಸ್.ಸುಮಾ ಇದ್ದರು.

ADVERTISEMENT

ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಹಾಗೂ ನಿಕಟಪೂರ್ವ ಅಧ್ಯಕ್ಷ ರೆಡ್ಡಿಶ್ರೀನಿವಾಸ ಅವರು ಧ್ವಜಾರೋಹಣ ನೆರವೇರಿಸಿದರು.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಶರಣಬಸಪ್ಪ ಭತ್ತದ ಮಾತನಾಡಿದರು. ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಇಒ ಕಾವ್ಯಾರಾಣಿ ಅವರು ಧ್ವಜಾರೋಹಣ ನೆರವೇರಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಭಾರ ಮುಖ್ಯಶಿಕ್ಷಕ ಪರಸಪ್ಪ ಹೊರಪೇಟೆ, ಶಿಕ್ಷಕರಾದ ವಿಮಲಬಾಯಿ ಜೋಷಿ, ತುಳಸಿ ಹಾಗೂ ಜ್ಯೋತಿ ಮ್ಯಾಗೇರಿ ಇದ್ದರು.

ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಎಸ್‌.ಸಿ ಮೋರ್ಚಾ ಅಧ್ಯಕ್ಷ ಸಣ್ಣ ಕನಕಪ್ಪ, ಪ್ರಮುಖರಾದ ಸುರೇಶ ಗುಗ್ಗಳಶೆಟ್ಟಿ ವಾಗೀಶ ಹಿರೇಮಠ, ಹನುಮಂತಪ್ಪ ಬಸರಿಗಿಡದ ಹಾಗೂ ತಿಪ್ಪಣ್ಣ ಮಡಿವಾಳರ ಇದ್ದರು.

ದ್ಯಾಮವ್ವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಕನಕಪ್ಪ, ಮುಖ್ಯಶಿಕ್ಷಕಿ ನಾಗರತ್ನ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಶಂಶಾದಬೇಗ್ಂ, ಶಿಕ್ಷಕರಾದ ಗೌರಮ್ಮ, ಹಾಲವ್ವ ರಾಥೋಡ ಹಾಗೂ ಎಸ್‌ಡಿಎಂಸಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.