ADVERTISEMENT

ಕಾಮನೂರು: ನರೇಗಾ ಯೋಜನೆಯ ದತ್ತು ಗ್ರಾಮ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 5:19 IST
Last Updated 9 ಅಕ್ಟೋಬರ್ 2024, 5:19 IST
ಕಾಮನೂರು ಗ್ರಾಮದ ಕೆರೆಯನ್ನು ಅಧಿಕಾರಿಗಳು ಪರಿಶೀಲಿಸಿದರು
ಕಾಮನೂರು ಗ್ರಾಮದ ಕೆರೆಯನ್ನು ಅಧಿಕಾರಿಗಳು ಪರಿಶೀಲಿಸಿದರು   

ಕೊಪ್ಪಳ: ಮದ್ಯಪಾನ ಮುಕ್ತ ಮತ್ತು ಶುಚಿತ್ವ ಹೊಂದಿದ ಗ್ರಾಮ ಎಂದು ಇತ್ತೀಚೆಗೆ ಸುದ್ದಿಯಲ್ಲಿರುವ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಮನೂರ ಗ್ರಾಮವು ಜಿಲ್ಲಾ ಪಂಚಾಯಿತಿ ದತ್ತು ಗ್ರಾಮವೆಂದು ಆಯ್ಕೆಯಾಗಿದೆ.

ಬೆಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೋರನಾಳ ಗ್ರಾಮವನ್ನೂ ಆಯ್ಕೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ರೇಷ್ಮೆ ಇಲಾಖೆಯಿಂದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅವಕಾಶ ಇರುವ ಕುರಿತು ಮಾಹಿತಿ ಪಡೆದರು. ಗ್ರಾಮಸ್ಥರು ತಮಗೆ ಅವಶ್ಯಕವಿರುವ ಕಾಮಗಾರಿ ಕುರಿತು ವಿವರಿಸಿದರು. ಎಲ್ಲಾ ತಾಂತ್ರಿಕ ಸಹಾಯಕರು ಪ್ರತಿ ಕಾಲೊನಿಗೆ ಭೇಟಿ ನೀಡಿ ಚರಂಡಿ, ರಸ್ತೆ, ಶಾಲಾಭಿವೃದ್ದಿ ಕಾಮಗಾರಿಗಳು ಅನುಷ್ಠಾನಗೊಳಿಸಲು ಸಂಪೂರ್ಣ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.

ADVERTISEMENT

ಗ್ರಾಮಕ್ಕೆ ಅವಶ್ಯವಿರುವ ಕಾಮಗಾರಿಗಳನ್ನು ಮನರೇಗಾ ಯೋಜನೆ ಹಾಗೂ ವಿವಿಧ ಇಲಾಖೆಗಳ ಒಗ್ಗೂಡಿಸುವಿಕೆ ಮೂಲಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವದು ಎಂದು ಸಭೆಯಲ್ಲಿ ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದರು. ಗ್ರಾಮದಲ್ಲಿರುವ ಸಣ್ಣ, ಅತಿ ಸಣ್ಣ ರೈತರಿಗೆ ನರೇಗಾದಡಿ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡಲಾಗುವದು. ಪ್ರತಿಯೊಬ್ಬರು ಯೋಜನೆಯ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಗ್ರಾಮಸ್ಥರಾದ ದ್ಯಾಮಣ್ಣ ಹೊನ್ನತ್ತಿ, ಮಲ್ಲಪ್ಪ ಕೊಡ್ಲಿ, ದೇವಪ್ಪ, ಮಹಾದೇವಪ್ಪ ಕುರಿ, ಪಿಡಿಒ ಸಂಗಮೇಶ ತೇರಿನ, ಜಿಲ್ಲಾ ಪಂಚಾಯಿತಿ ನರೇಗಾ ಲೆಕ್ಕ ಶಾಖೆ ವ್ಯವಸ್ಥಾಪಕ ಪಂಪನಗೌಡ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಲ್ಲೂಕು ಐಇಸಿ ಸಂಯೋಜಕ ದೇವರಾಜ ಪತ್ತಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.