ಕುಕನೂರು: ‘ಕನಕದಾಸರ ಆದರ್ಶ, ತತ್ವ, ಸಿದ್ಧಾಂತ ಸಂದೇಶಗಳನ್ನು ಜೀವನದುದ್ದಕ್ಕೂ ಅಳವಡಿಸಿಕೊಳ್ಳಬೇಕು’ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ ರವಿ ಹೇಳಿದರು.
ತಾಲ್ಲೂಕಿನ ತಳಕಲ್ ಗ್ರಾಮದ ಕೊಪ್ಪಳ ವಿವಿ ಆವರಣದಲ್ಲಿ ಕನಕದಾಸ ಜಯಂತಿ ಆಚರಣೆಯ ಸಂದರ್ಭದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ವಾರ್ಚನೆ ಸಲ್ಲಿಸಿ ಅವರು ಮಾತನಾಡಿದರು. ‘ದಾಸಶ್ರೇಷ್ಠ ಕನಕದಾಸರು ಸಮಾಜದಲ್ಲಿನ ಮೂಢನಂಬಿಕೆ, ಜಾತಿ ಪದ್ಧತಿ ಸೇರಿದಂತೆ ಅನಿಷ್ಟ ಪದ್ಧತಿಗಳ ವಿರುದ್ದ ಧ್ವನಿ ಎತ್ತಿ, ಸಮಾಜದ ಅಂಕು-ಡೊಂಕುಗಳನ್ನು ತಿದ್ದಿದ ಮಹಾನ್ ದಾರ್ಶನಿಕ. ತಮ್ಮ ಕೀರ್ತನೆ, ಕಾವ್ಯಗಳು ಹಾಗೂ ಬದುಕಿನ ಮೂಲಕ ಜೀವಪರ ಸಂದೇಶಗಳನ್ನು ನೀಡಿದ್ದಾರೆ’ ಎಂದರು.
ಕೊಪ್ಪಳ ವಿವಿಯ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ್ ಯಳವಟ್ಟಿ, ಜಡಿಯಪ್ಪ, ಪ್ರವೀಣ ಪೊಲೀಸ್ ಪಾಟೀಲ, ಸಂತೋಷ ಕುಮಾರ, ಪಾರ್ವತಿ, ಅಯ್ಯಪ್ಪ, ಶ್ರೀಕಂತ್, ಸುಧಾಕರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.