ADVERTISEMENT

ಕನಕಗಿರಿ: ಶಾಸಕರ ತಾಯಿ, ಗ್ರಾಪಂ ಅಧ್ಯಕ್ಷೆ!

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2021, 10:43 IST
Last Updated 3 ಫೆಬ್ರುವರಿ 2021, 10:43 IST
ಸಿಂಧನೂರು ತಾಲ್ಲೂಕು ದಢೇಸೂಗುರು ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಆಯ್ಕೆಯಾದ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಅವರ ತಾಯಿ ದುರಗಮ್ಮ ಅವನ್ನು ಕಾರ್ಯಕರ್ತರು ಅಭಿನಂದಿಸಿದರು.
ಸಿಂಧನೂರು ತಾಲ್ಲೂಕು ದಢೇಸೂಗುರು ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಆಯ್ಕೆಯಾದ ಕನಕಗಿರಿ ಶಾಸಕ ಬಸವರಾಜ ದಢೇಸೂಗೂರು ಅವರ ತಾಯಿ ದುರಗಮ್ಮ ಅವನ್ನು ಕಾರ್ಯಕರ್ತರು ಅಭಿನಂದಿಸಿದರು.   

ಕನಕಗಿರಿ: ಕ್ಷೇತ್ರದ ಶಾಸಕ ಬಸವರಾಜ ದಢೇಸೂಗುರು ಅವರ ತಾಯಿ ದುರುಗಮ್ಮ ದುರಗಪ್ಪ ದಢೇಸೂಗೂರು ಅವರು ಸಿಂಧನೂರು ತಾಲ್ಲೂಕಿನ ದಢೇಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಬುಧವಾರ ಆಯ್ಕೆಯಾಗಿದ್ದಾರೆ.

ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ದುರುಗಮ್ಮ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಕಾರಣ ಅವಿರೋಧ ಆಯ್ಕೆ ನಡೆಯಿತು.

ಶಾಸಕ ಬಸವರಾಜ ಅವರ ತಂದೆ ದುರುಗಪ್ಪ ದಢೇಸೂಗೂರು ಅವರು ಇದೇ ಗ್ರಾಮ ಪಂಚಾಯಿತಿಯಿಂದ ಆರು ಸಲ ಸದಸ್ಯರಾಗಿ ಹಾಗೂ ಒಂದು ಸಲ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರೆ. ದುರುಗಮ್ಮ ಸಹ ಎರಡು ಸದಸ್ಯರಾಗಿ ಒಮ್ಮೆ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ADVERTISEMENT

ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಬಸವರಾಜ ದಢೇಸೂಗೂರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.