ಪ್ರಾತಿನಿಧಿಕ ಚಿತ್ರ
ಕನಕಗಿರಿ: ಜಿಲ್ಲಾಡಳಿತದಿಂದ ಜೂನ್ 26ರಂದು ನಡೆದಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಟ್ಟಣದ ಗೌಡರ ಓಣಿ ಯುವಕ ಸಂಗಪ್ಪ ತಮಗೆ ಕನ್ಯೆ ಹುಡುಕಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ವಿಷಯಕ್ಕೆ ಸಂಬಂಧಿಸಿದಂತೆ ವಧುಗಳು ಇರುವ ಬಗ್ಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಯು ಯುವಕನಿಗೆ ಪತ್ರ ಬರೆದಿದ್ದಾರೆ.
‘ಕನ್ಯೆ ಹುಡುಕುವ ವಿಷಯಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಯನ್ನು ಸಂಪರ್ಕಿಸಿದ್ದು, ಬಳ್ಳಾರಿಯ ಶ್ರೀ ಸೇವಾನಿಕೇತನ ಎಂಬ ಸ್ವಯಂ ಸೇವಾ ಸಂಸ್ಥೆಯಲ್ಲಿ ಕನ್ಯೆ ಸಿಗುವ ಮಾಹಿತಿ ಸಿಗುತ್ತದೆ ಎಂದು ತಿಳಿಸಿದ್ದಾರೆ’ ಎಂದು ಸಂಗಪ್ಪ ಅವರಿಗೆ ಮಾಹಿತಿ ನೀಡಲಾಗಿದೆ. ಪತ್ರದ ಪ್ರತಿಯನ್ನು ಜಿಲ್ಲಾಧಿಕಾರಿ ಅವರಿಗೂ ಸಲ್ಲಿಸಲಾಗಿದೆ.
‘ನಾನು ರೈತ ಕುಟುಂಬದಿಂದ ಬಂದಿದ್ದೇನೆ. ಹತ್ತಾರು ವರ್ಷಗಳಿಂದಲೂ ವಧು ಅನ್ವೇಷಣೆಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದೇನೆ. ಯಾರೂ ಕನ್ಯೆ ನೀಡಲು ಮುಂದೆ ಬರುತ್ತಿಲ್ಲ. ಹೀಗಾಗಿ ಮಾನಸಿಕವಾಗಿ ನೊಂದಿರುವೆ. ನೀವಾದರೂ ಕನ್ಯೆ ಹುಡುಕಿ ನನ್ನ ಮದುವೆಗೆ ಸಹಕರಿಸಿ’ ಎಂದು ಸಂಗಪ್ಪ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.