
ಕನಕಗಿರಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಫಲಿತಾಂಶ ಹೆಚ್ಚಿಸಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದು ಉಪ ಪ್ರಾಂಶುಪಾಲ ಜಗದೀಶ ಹಾದಿಮನಿ ತಿಳಿಸಿದರು.
ಜಿಲ್ಲಾಡಳಿತ. ಜಿಲ್ಲಾ ಪಂಚಾಯಿತಿ ಕೊಪ್ಪಳ, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀಮತಿ ಪಾರ್ವತೆಮ್ಮ ಬಸನಗೌಡ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ದಿ ಟ್ರಸ್ಟ್ ಸಹಯೋಗದಲ್ಲಿ ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಈಚೆಗೆ ಆಯೋಜಿಸಿದ್ದ ವಿಜ್ಞಾನ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಪರೀಕ್ಷೆ ಒಂದು ಹಬ್ಬದಂತೆ ಆಚರಣೆ ಮಾಡಬೇಕು. ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಶಿಕ್ಷಕರ ಶ್ರಮದ ಜತೆಗೆ ವಿದ್ಯಾರ್ಥಿಗಳ ಶ್ರದ್ದೆ, ಅಧ್ಯಯನ ಸಹ ಮುಖ್ಯವಾಗಿದೆ’ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿ ಸಿದ್ದಲಿಂಗಯ್ಯ ಅವರು ವಿಜ್ಞಾನದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯುವದು ಹೇಗೆ ಎಂಬುದು ಕುರಿತು ಉಪನ್ಯಾಸ ನೀಡಿದರು.
ವಿಜ್ಞಾನ ಶಿಕ್ಷಕ ರಾಜೇಶ್ವರರೆಡ್ಡಿ ಮಾತನಾಡಿದರು. ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ, ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಅನಿಲಕುಮಾರ, ಶಿಕ್ಷಕರಾದ ಕನಕಾಚಲ. ಮೌನೇಶ ಬಡಿಗೇರ ಇದ್ದರು.
ಗಣಿತ ಕಾರ್ಯಾಗಾರ: ಸಮೀಪದ ಕಲಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪಾರ್ವತಮ್ಮ ಬಸವನಗೌಡ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಶನಿವಾರ ಗಣಿತ ವಿಷಯದ ಕಾರ್ಯಾಗಾರ ನಡೆಯಿತು.
ಗಣಿತ ಶಿಕ್ಷಕ ಮಹಾದೇವಸ್ವಾಮಿ, ಮುಖ್ಯ ಶಿಕ್ಷಕ ಬಸಪ್ಪ ಕರಾಬದಿನ್ನಿ, ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ ಗೌಡ ಪಾಟೀಲ ಮಾತನಾಡಿದರು.
ಗಣಿತ ಸಂಪನ್ಮೂಲ ವ್ಯಕ್ತಿ ಶ್ರೀಧರ ಲಂಬು ಗಣಿತದ ಸಮಸ್ಯೆಗಳನ್ನು ಸರಳವಾಗಿ ಬಿಡಿಸುವ ವಿಧಾನ ಹಾಗೂ ಪರೀಕ್ಷೆಯ ಟಿಪ್ಸ್ ಗಳನ್ನು ತಿಳಿಸಿದರು. ಶಿಕ್ಷಕರಾದ ಮಲ್ಲಿಕಾ, ಮಲ್ಲಪ್ಪ, ರಮೇಶ, ಲಕ್ಷ್ಮಣ, ಶರಬಸವ, ಹನುಮೇಶ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.