ADVERTISEMENT

ಶಿಕ್ಷಕರ ಸಹ ಪಠ್ಯ ಚಟುವಟಿಕೆ: ರಾಜ್ಯ ಮಟ್ಟಕ್ಕೆ ಸೈಫುಲ್ಲಾ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2025, 6:20 IST
Last Updated 14 ಡಿಸೆಂಬರ್ 2025, 6:20 IST
ಸೈಫುಲ್ಲಾ ಟಿ.‌ಎಚ್.
ಸೈಫುಲ್ಲಾ ಟಿ.‌ಎಚ್.   

ಕನಕಗಿರಿ: ಸಮೀಪದ ವೆಂಕಟಗಿರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಸೈಫುಲ್ಲಾ ಟಿ.‌ಎಚ್. ಅವರು
ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳ ಜಿಲ್ಲಾ ಮಟ್ಟದ‌ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ‌ ನಿಧಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕೊಪ್ಪಳದಲ್ಲಿ ಗುರುವಾರ ನಡೆದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾಗಿದ್ದಾರೆ. 

ಬೆಂಗಳೂರಿನಲ್ಲಿ ಡಿ.22ರಂದು ನಡೆಯುವ ರಾಜ್ಯಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.