ADVERTISEMENT

ಕನಕಗಿರಿ | 'ದುಶ್ಚಟಗಳಿಂದ ದೂರ ಇರಲು ಸಲಹೆ'

ಏಡ್ಸ್ ಜಾಗೃತಿ ಅರಿವಿನ ಮಾಸಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 6:09 IST
Last Updated 13 ಆಗಸ್ಟ್ 2025, 6:09 IST
ಕನಕಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಡಾ. ಶಶಿಧರ ಮಾತನಾಡಿದರು
ಕನಕಗಿರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಅಂತರರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಡಾ. ಶಶಿಧರ ಮಾತನಾಡಿದರು   

ಕನಕಗಿರಿ: ಇಂದಿನ‌ ಯುವಜನತೆ ಸಾಮಾಜಿಕ ಮಾಧ್ಯಮದ ಪ್ರಭಾವಕ್ಕೆ ಒಳಗಾಗಿ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.‌ಶಶಿಧರ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಕೊಪ್ಪಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ , ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಮತ್ತು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಎಚ್.ಐ.ವಿ, ಏಡ್ಸ್ ಜಾಗೃತಿ ಅರಿವಿನ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯುವ ಸಮುದಾಯ ಬಾಲ್ಯದಿಂದಲೇ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಸಮಾಜದಲ್ಲಿ ಜಾಗೃತರಾಗಿ ವರ್ತಿಸಬೇಕು. ಏಡ್ಸ್‌ನಂತಹ ಕಾಯಿಲೆಗಳಿಗೆ ಒಳಗಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.

ADVERTISEMENT

ಆಗಸ್ಟ್‌ನಿಂದ ಸೆಪ್ಟೆಂಬರ್‌ವರೆಗೆ ಜಿಲ್ಲೆಯಲ್ಲಿ ಗ್ರಾಮ ಸಭೆ, ಭಿತ್ತಿ ಚಿತ್ರ ಸ್ಪರ್ಧೆ, ಬೈಕ್ ಜಾಥಾ, ರಸಪ್ರಶ್ನೆ ಕಾರ್ಯಕ್ರಮ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ ಇತರೆ ಮಾಧ್ಯಮಗಳ ಮೂಲಕ ಜಿಲ್ಲೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಯುವ ಸಬಲೀಕರಣ ಕ್ರೀಡಾ ಇಲಾಖೆಯ ತಾಲ್ಲೂಕು ಅಧಿಕಾರಿ ತಿಪ್ಪಣ್ಣ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಪ್ರಭಾರ ಪ್ರಾಂಶುಪಾಲ ಅಮರೇಶ ದೇವರಾಳ ಮಾತನಾಡಿದರು.
ಜಿಲ್ಲಾಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಅಕ್ಷತಾ ನಾಗದೇವಿ.ಎ, ದ್ವಿತೀಯ ಸ್ಥಾನ ಅಂಜಲಿ, ತೃತೀಯ ಸ್ಥಾನ ಪಡೆದ ವೈಭವಿ ಅವರಿಗೆ ಇದೇ ಸಮಯದಲ್ಲಿ ಬಹುಮಾನ ವಿತರಿಸಲಾಯಿತು.

ಪಟ್ಟಣ ಪಂಚಾಯತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ, ಉಪಾಧ್ಯಕ್ಷ ಕಂಠೀರಂಗ ನಾಯಕ, ತಾ.ಪಂ. ಯೋಜನಾಧಿಕಾರಿ ಹುಲಗಪ್ಪ, ಉಪ ತಹಶೀಲ್ದಾರ್ ಅನಿತಾ ಇಂಡಿ, ಎನ್ಎಸ್ಎಸ್ ಅಧಿಕಾರಿ ಶಿವಪುತ್ರಪ್ಪ ಗಳಪೂಜೆ, ದಂತ ಆರೋಗ್ಯ ಅಧಿಕಾರಿ ಡಾ. ಬಿನಾದೇವಿ, ಜಿಲ್ಲಾ ಮೇಲ್ವಿಚಾರಕ ಮಾಲತೇಶ ಸಜ್ಜನ್ ಇತರರು ಇದ್ದರು.

ಉಪನ್ಯಾಸಕ ಹನುಮೇಶ ಲಾಯದುಣಸಿ ಸ್ವಾಗತಿಸಿದರು, ಅಮರೇಶ ಅಂಗಡಿ ಭಿತ್ತಚಿತ್ರ ಬಿಡುಗಡೆ ಕುರಿತು ವಿವರಿಸಿದರು. ಪರ್ವಿನ್ ಬೇಗಂ ನಿರೂಪಿಸಿದರು.
ಸಿದ್ರಾಮಪ್ಪ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.