ADVERTISEMENT

ಕಂದಾಯ ಅದಾಲತ್ ಸದ್ಬಳಕೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2021, 13:21 IST
Last Updated 3 ಜನವರಿ 2021, 13:21 IST
ಯಲಬುರ್ಗಾ ತಾಲ್ಲೂಕು ಮುಧೋಳ ಗ್ರಾಮದಲ್ಲಿ ಶನಿವಾರ ನಡೆದ ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ನಾರಾಯಣ ಕನಕರಡ್ಡಿ ಚಾಲನೆ ನೀಡಿದರು
ಯಲಬುರ್ಗಾ ತಾಲ್ಲೂಕು ಮುಧೋಳ ಗ್ರಾಮದಲ್ಲಿ ಶನಿವಾರ ನಡೆದ ಕಂದಾಯ ಅದಾಲತ್ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ನಾರಾಯಣ ಕನಕರಡ್ಡಿ ಚಾಲನೆ ನೀಡಿದರು   

ಯಲಬುರ್ಗಾ: ‘ಕಂದಾಯ ಅದಾಲತ್‌ ಮೂಲಕ ಸಾರ್ವಜನಿಕರು ಕಂದಾಯ ಇಲಾಖೆಗೆ ಸಂಬಂಧಿಸಿದ ವಿವಿಧ ಸೇವೆಗಳನ್ನು ತ್ವರಿತವಾಗಿ ಪಡೆದುಕೊಳ್ಳಬಹುದು’ ಎಂದು ತಹಶೀಲ್ದಾರ್ ಶ್ರೀಶೈಲ ತಳವಾರ ತಿಳಿಸಿದರು.

ತಾಲ್ಲೂಕಿನ ಮುಧೋಳ ಗ್ರಾಮದಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಕಂದಾಯ ಮತ್ತು ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಈ ಕಾರ್ಯಕ್ರಮದಿಂದ ಸಾರ್ವಜನಿಕರಿಗೆ ಅನಗತ್ಯವಾಗಿ ಕಚೇರಿಗೆ ಅಲೆಯುವುದು ತಪ್ಪುತ್ತದೆ. ಅಧಿಕಾರಿಗಳು, ಸಿಬ್ಬಂದಿ ಹಾಗೂ ಸೇವೆ ಪಡೆಯುವ ಸಾರ್ವಜನಿಕರು ಮುಖಾಮುಖಿಯಾಗಿ ಸಂಪರ್ಕ ಸಾಧಿಸಿ ಕೆಲಸ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.

ADVERTISEMENT

ಉಪವಿಭಾಗಾಧಿಕಾರಿ ನಾರಾಯಣ ಕನಕರೆಡ್ಡಿ ಮಾತನಾಡಿ,‘ಕಂದಾಯ ಇಲಾಖೆಯ ಕಾರ್ಯ ಒತ್ತಡದಿಂದ ಸಕಾಲದಲ್ಲಿ ಜನರಿಗೆ ಸ್ಪಂದಿಸಲು ಸಾಧ್ಯವಾಗದ ಕಾರಣ ಅದಾಲತ್ ಮೂಲಕ ಅರ್ಜಿಗಳ ವಿಲೇವಾರಿ ಮಾಡಲಾಗುತ್ತಿದೆ’ ಎಂದು ಹೇಳಿದರು.

ಮೂಧೋಳ ಗ್ರಾಮ ಲೆಕ್ಕಾಧಿಕಾರಿ ಕುಮಾರ ಪರಸಾಪುರ, ಕಂದಾಯ ನಿರೀಕ್ಷಕ ಹುಸೇನ ಸಾಬ್, ಸರ್ವೆ ಮೇಲ್ವಿಚಾರಕ ಶ್ರೀನಿವಾಸ, ಗ್ರಾಮದ ಮುಖಂಡರಾದ ಅಪ್ಪಣ ಪಲ್ಲೇದ, ಹೇಮರೆಡ್ಡಿ ರಡ್ಡೆರ ಹಾಗೂ ಬಸಪ್ಪ ಹಕ್ಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.