
ಕೊಪ್ಪಳದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿವಿಧ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಕೊಪ್ಪಳ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕನ್ನಡ ಮತ್ತು ಸಂಸ್ಕೃತ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕನ್ನಡಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.
ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು
ಕರ್ನಾಟಕ ಏಕೀಕರಣಗೊಂಡು 69 ವರ್ಷಗಳು ಪೂರ್ಣಗೊಂಡಿದ್ದು, ಎಲ್ಲ ಕಡೆ ಸುಖ ಶಾಂತಿ ನೆಲೆಸುವಂತಾಗಲಿ. ಆಲೂರು ವೆಂಕಟರಾಯರು, ಬಿ.ಎಂ. ಶ್ರೀಕಂಠಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಕುವೆಂಪು, ಶಿವರಾಂ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ ಹೀಗೆ ಅನೇಕರು ಕನ್ನಡದ ಬೆಳವಣಿಗೆಗೆ ಶ್ರಮಿಸಿದ್ದಾರೆ ಎಂದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪ್ರಸ್ತಾಪಿಸಿದ ಸಚಿವರು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕು ಹಸನಾಗಿದೆ, ಆರ್ಥಿಕ ಚಟುವಟಿಕೆ ಕೂಡ ವೇಗ ಪಡೆದುಕೊಂಡರು.
ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.