
ಕನಕಗಿರಿ: ಇಲ್ಲಿನ ಪಟ್ಟಣ ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ಕಂಠಿರಂಗ ನಾಯಕ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದ ಹುಸೇನಬಿ ಚಳ್ಳಮರದ್ ಅವರು ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದ್ದು, ಶನಿವಾರ ಸಹಾಯಕ ಆಯುಕ್ತರು ರಾಜೀನಾಮೆಯನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ನಿಯಮದ ಪ್ರಕಾರ ಉಪಾಧ್ಯಕ್ಷರಾಗಿದ್ದ ಕಂಠಿರಂಗ ಅಧಿಕಾರ ಸ್ವೀಕರಿಸಿದರು.
ಸಚಿವರಾದ ಶಿವರಾಜ ತಂಗಡಗಿ ಅವರು ಹಾಗೂ ಸರ್ವ ಸದಸ್ಯರ ಸಹಕಾರ, ಮಾರ್ಗದರ್ಶನದಿಂದ ಪಟ್ಟಣದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.
ಮುಖ್ಯಾಧಿಕಾರಿ ಲಕ್ಷ್ಮಣ ಕಟ್ಟಿಮನಿ, ಬ್ಲಾಕ್ ಅಧ್ಯಕ್ಷ ಕೆ. ಗಂಗಾಧರ ಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ವೀರೇಶ ಸಮಗಂಡಿ, ವಕ್ತಾರ ಶರಣಬಸಪ್ಪ ಭತ್ತದ, ಸದಸ್ಯರಾದ ಸಂಗಪ್ಪ ಸಜ್ಜನ,ಅನಿಲಕುಮಾರ ಬಿಜ್ಜಾಳ, ಶರಣೆಗೌಡ ಪಾಟೀಲ, ಶೇಷಪ್ಪ ಪೂಜಾರ, ರಾಕೇಶ ಕಂಪ್ಲಿ, ಹನುಮಂತ ಬಸರಿಗಿಡದ, ನಂದಿನಿ ಓಣಿಮನಿ ಪ್ರಮುಖರಾದ ಟಿ.ಜೆ. ರಾಮಚಂದ್ರ, ಅನ್ನು ಚಳ್ಳಮರದ, ಸುರೇಶ ಕುರುಗೋಡ ಹಾಗೂ ನಾಮ ನಿರ್ದೇಶನ ಸದಸ್ಯರು ಹಾಗೂ ನಗರ ಆಶ್ರಯ ಸಮಿತಿ ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.