ADVERTISEMENT

ಕಾರಟಗಿ: ಐತಿಹಾಸಿಕ ಪುಷ್ಕರಣಿಯ ಸ್ವಚ್ಛತೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 6:46 IST
Last Updated 26 ನವೆಂಬರ್ 2025, 6:46 IST
ಕಾರಟಗಿಯ ಐತಿಹಾಸಿಕ ಪುಷ್ಕರಣಿಯ ಸ್ವಚ್ಛತಾ ಕಾರ್ಯ ಮಂಗಳವಾರ ನಡೆಯಿತು
ಕಾರಟಗಿಯ ಐತಿಹಾಸಿಕ ಪುಷ್ಕರಣಿಯ ಸ್ವಚ್ಛತಾ ಕಾರ್ಯ ಮಂಗಳವಾರ ನಡೆಯಿತು   

ಕಾರಟಗಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಸರ್ವ ಜನಾಂಗದ ಹಿತರಕ್ಷಣೆಯ ಹಿನ್ನೆಲೆಯಲ್ಲಿ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದು, ಅವರ ಸಾಮಾಜಿಕ ಕಳಕಳಿ ಶ್ಲಾಘನೀಯ. ವಿವಿಧ ಉದ್ದೇಶಗಳಿಗೆ ಸದಾ ಸಹಾಯ ಹಸ್ತ ಚಾಚುತ್ತಿರುವ ಧರ್ಮಸ್ಥಳ ಸಂಸ್ಥೆಯು ಇದೀಗ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿರುವುದು ಪ್ರಸಂಶನೀಯ ಎಂದು ವಿಶೇಷ ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಶಿವರೆಡ್ಡಿ ನಾಯಕ ವಕೀಲ ಹೇಳಿದರು.

ಪಟ್ಟಣದಲ್ಲಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ನಿಮಿತ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಹಮ್ಮಿಕೊಂಡಿದ್ದ ಐತಿಹಾಸಿಕ ಪುಷ್ಕರಣಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪಂಚಮಸಾಲಿ ದಾಸೋಹ ಸಮಿತಿ ರಾಜ್ಯಾಧ್ಯಕ್ಷ ಚನ್ನಬಸಪ್ಪ ಸುಂಕದ ಮಾತನಾಡಿ, ‘ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಾಯಕವಾಗಿದೆ. ಅನೇಕ ಕುಟುಂಬಗಳು ಸಾಲದ ಸುಳಿಯಿಂದ ಹೊರಬಂದು ಆರ್ಥಿಕ ಸ್ವಾವಲಂಬನೆ ಸಾಧಿಸಿವೆ. ಶಿಕ್ಷಣ, ಸಾಮಾಜಿಕ ಅಭಿವೃದ್ಧಿಯ ಜೊತೆಗೆ ಸ್ಮಶಾನ, ದೇವಸ್ಥಾನ ಅಭಿವೃದ್ಧಿಗೂ ಒತ್ತು ನೀಡುತ್ತಿರುವ ಕಾರ್ಯ ಇತರರಿಗೆ ಮಾದರಿ’ ಎಂದರು.

ADVERTISEMENT

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ನಾಗರಾಜ ಅರಳಿ, ಪುರಸಭೆ ಸದಸ್ಯ ಹಿರೇಬಸಪ್ಪ ಸಜ್ಜನ್, ಪ್ರಮುಖರಾದ ರಾಜಶೇಖರ ಆನೆಹೊಸೂರು, ಶರಣಯ್ಯಸ್ವಾಮಿ ಸಾಹುಕಾರ ಯರಡೋಣ, ಜಿಪಂ ಮಾಜಿ ಅಧ್ಯಕ್ಷ ಅಮರೇಶ ಕುಳಗಿ, ಮಹೇಶ ಕಂದಗಲ್, ವೆಂಕಟೇಶ ಮರಾಠಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯ ಮುಖ್ಯಸ್ಥರು ಸೇರಿದಂತೆ ಅನೇಕ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.