ADVERTISEMENT

ಗಂಗಾವತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟು; ಪ್ರಮುಖರ ಸಭೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 8:32 IST
Last Updated 4 ಜನವರಿ 2023, 8:32 IST
   

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದ್ದು, ಈ ಕುರಿತು ಚರ್ಚಿಸಲು ಬುಧವಾರ ಪಕ್ಷದ ಪ್ರಮುಖರ ಸಭೆ ನಡೆಯಿತು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಜಿಲ್ಲೆಯ ಕುಷ್ಟಗಿ, ಯಲಬುರ್ಗಾ, ಕೊಪ್ಪಳ ಹಾಗೂ ಕನಕಗಿರಿ ಕ್ಷೇತ್ರಗಳ ಆಯ್ಕೆ ಬಗ್ಗೆ ಹೆಚ್ಚು ಹೊತ್ತು ಚರ್ಚೆ ನಡೆಯಲಿಲ್ಲ. ಗಂಗಾವತಿಯಿಂದ ಸ್ಪರ್ಧಿಸಲು ಟಿಕೆಟ್ ಕೊಡಬೇಕು ಎಂದು ಮಲ್ಲಿಕಾರ್ಜುನ ನಾಗಪ್ಪ, ಎಚ್.ಆರ್. ಶ್ರೀನಾಥ್ ಹಾಗೂ ಇಕ್ಬಾಲ್ ಅನ್ಸಾರಿ ಅರ್ಜಿ ಸಲ್ಲಿಸಿದ್ದಾರೆ. ಜನಾರ್ದನ ರೆಡ್ಡಿ ಹೊಸ ಪಕ್ಷದ ಮೂಲಕ ಗಂಗಾವತಿಯಿಂದಲೇ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದಾರೆ. ಆದ್ದರಿಂದ ಅಭ್ಯರ್ಥಿ ಆಯ್ಕೆ ತಲೆ‌ನೋವಾಗಿದೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಲ್ಲಿಕಾರ್ಜುನ ನಾಗಪ್ಪ 'ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ನನಗೆ ಸಿಗಬೇಕು ಇಲ್ಲವೇ ಎಚ್.ಆರ್. ಶ್ರೀನಾಥ್ ಅವರಿಗೆ ಕೊಡಬೇಕು. ಮೂರನೇಯವರಿಗೆ ಟಿಕೆಟ್ ಕೊಡುವಂತಿಲ್ಲ' ಎಂದು ಅನ್ಸಾರಿ ಹೆಸರು ಉಲ್ಲೇಖಿಸದೇ ಹೇಳಿದರು.

ADVERTISEMENT

'ಕೊಪ್ಪಳದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರ ಎದುರಿಗೆ ನಮ್ಮ‌ಅಭಿಪ್ರಾಯ ಹೇಳಿದ್ದೇವೆ. ನನಗೆ ಟಿಕೆಟ್ ಸಿಕ್ಕೆ ಸಿಗುತ್ತದೆ ಎಂಬ ವಿಶ್ವಾಸವಿದೆ.‌ ನನಗೆ ಕೊಡದಿದ್ದರೆ ಎಚ್.ಆರ್. ಶ್ರೀನಾಥ ಅವರಿಗೆ ಕೊಡುತ್ತಾರೆ' ಎಂದರು.

ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಸ್ಪರ್ಧೆ ಮಾಡುವುದರಿಂದ ನಮಗೆ ಏನೂ ಪರಿಣಾಮ ಆಗುವುದಿಲ್ಲ. ಗಂಗಾವತಿ
ಮೊದಲಿನಿಂದಲೂ ಕಾಂಗ್ರೆಸ್ ಕ್ಷೇತ್ರದ ಗಟ್ಟಿ ಬುನಾದಿ. ಪಕ್ಷಕ್ಕೆ ದುಡಿದವರಿಗೆ ಟಿಕೆಟ್ ಕೊಡುವಂತೆ ಮನವಿ ಮಾಡಿದ್ದೇವೆ. ಎಚ್. ಆರ್. ಶ್ರೀನಾಥ್ ಪಕ್ಷ ಬಿಟ್ಟು ಮತ್ತೆ ಬಂದಿದ್ದರೂ ಅವರ ತಂದೆ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.