ಕೊಪ್ಪಳ: ಸಾರಿಗೆ ನೌಕರರ ಸಂಘಟನೆಗಳು ಮುಷ್ಕರವಿದ್ದರೂ ಕೊಪ್ಪಳ ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ಪರೀಕ್ಷೆ ಮಂಗಳವಾರ ನಿಗದಿಯಾಗಿತ್ತು. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು.
ಈ ಕುರಿತು ‘ಪ್ರಜಾವಾಣಿ’ ವೆಬ್‌ನಲ್ಲಿ ಪ್ರಕಟವಾದ ವರದಿಗೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ಅವರು ಸ್ಪಂದಿಸಿದ್ದು ಪರೀಕ್ಷೆಯನ್ನು ಮುಂದೂಡಿ ಆದೇಶಿಸಿದ್ದಾರೆ.
‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗುತ್ತಿದ್ದಂತೆಯೇ ಪತ್ರಿಕೆಯ ಜಿಲ್ಲಾ ಪ್ರತಿನಿಧಿಗೆ ಕರೆ ಮಾಡಿದ ಬಿ.ಕೆ. ರವಿ ಅವರು ‘ವಿದ್ಯಾರ್ಥಿಗಳ ಸಲುವಾಗಿಯೇ ಪರೀಕ್ಷೆ ನಿಗದಿ ಮಾಡಲಾಗಿತ್ತು. ಸ್ನಾತಕೋತ್ತರ ಕೇಂದ್ರಗಳಲ್ಲಿಯೂ ಪರೀಕ್ಷೆಯಿತ್ತು. ಬಸ್‌ಗಳ ಸೌಲಭ್ಯವಿಲ್ಲದ ಕಾರಣ ಹಲವು ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವ ವಿಷಯ ಪ್ರಜಾವಾಣಿ ವರದಿ ಮೂಲಕ ಗಮನಕ್ಕೆ ಬಂದಿದ್ದು, ಪರೀಕ್ಷೆ ಮುಂದೂಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.