ADVERTISEMENT

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ; ನಾಳೆ ನಿರ್ಧಾರ: ತಂಗಡಗಿ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 6:34 IST
Last Updated 6 ಅಕ್ಟೋಬರ್ 2025, 6:34 IST
<div class="paragraphs"><p>ಶಿವರಾಜ ತಂಗಡಗಿ</p></div>

ಶಿವರಾಜ ತಂಗಡಗಿ

   

ಕೊಪ್ಪಳ: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೊನೆಯ ದಿನಾಂಕ ಅ. 7ರಂದು (ನಾಳೆ) ಮುಕ್ತಾಯವಾಗಲಿದ್ದು, ದಿನಾಂಕ ವಿಸ್ತರಣೆ ಬಗ್ಗೆ ಮಂಗಳವಾರ ನಿರ್ಧಾರ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ‌ ಮೊದಲಿಗಿಂತಲೂ ಈಗ ವೇಗವಾಗಿ ಸಮೀಕ್ಷೆ ನಡೆಯುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಇದೆಲ್ಲವನ್ನೂ ಅವಲೋಕಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಮಂಗಳವಾರ ಮಧ್ಯಾಹ್ನ ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು.

ADVERTISEMENT

ಸಚಿವ ವಿ. ಸೋಮಣ್ಣ ಹಾಗೂ ಬಿಜೆಪಿ ನಾಯಕರು ಮಾನಸಿಕವಾಗಿ ಕುಗ್ಗಿದ್ದಾರೆ. ಜಾತಿ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಮಾತ್ರ ಜಾತಿಗಳನ್ನು ಒಂದುಗೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.