ADVERTISEMENT

ರಸ್ತೆ ಗುಂಡಿ ಮುಚ್ಚಲಾಗದ ಕಾಂಗ್ರೆಸ್ ಸರ್ಕಾರ: ಬಿಜೆಪಿ ಟೀಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2025, 4:21 IST
Last Updated 25 ಸೆಪ್ಟೆಂಬರ್ 2025, 4:21 IST
ಕಾರಟಗಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಬಿದ್ದಿರುವ ಸ್ಥಳದಲ್ಲೇ ಬಿಜೆಪಿ ಬುಧವಾರ ಪ್ರತಿಭಟನೆ ನಡೆಸಿತು
ಕಾರಟಗಿಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ಗುಂಡಿ ಬಿದ್ದಿರುವ ಸ್ಥಳದಲ್ಲೇ ಬಿಜೆಪಿ ಬುಧವಾರ ಪ್ರತಿಭಟನೆ ನಡೆಸಿತು   

ಕಾರಟಗಿ: ಪಟ್ಟಣದ ಹೃದಯ ಭಾಗದಲ್ಲಿಯ ಮುಖ್ಯರಸ್ತೆಗಳಲ್ಲಿಯ ಗುಂಡಿಗಳನ್ನು ಮುಚ್ಚಲಾಗದೆ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಗುಂಡಿಗಳ ಮೂಲಕ ಜೀವ ಹಿಂಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಮಸ್ಕಿ ಹೇಳಿದರು.

ರಾಜ್ಯದಲ್ಲಿನ ರಸ್ತೆಗಳ ಅವ್ಯವಸ್ಥೆಯನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಿಯ ಬಿಜೆಪಿಯಿಂದ ಬುಧವಾರ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.


‘ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಸರ್ಕಾರ ಜನರ ಹಿತರಕ್ಷಣೆ ಮರೆತಿದ್ದು, ಸರ್ಕಾರದ ಖಜಾನೆಯೇ ಖಾಲಿಯಾಗಿದೆ’ ಎಂದು ಟೀಕಿಸಿದರು.

ADVERTISEMENT

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮೌನೇಶ ದಢೇಸೂಗೂರು, ಬಿಜೆಪಿ ಎಸ್‍ಟಿ ಮೋರ್ಚಾ ಅಧ್ಯಕ್ಷ ದೇವರಾಜ ನಾಯಕ, ರೈತ ಮೋರ್ಚಾ ಅಧ್ಯಕ್ಷ ಶಿವಶರಣಪ್ಪ ಶಿವಪೂಜಿ, ಪ್ರಮುಖರಾದ ಅಮರೇಶಪ್ಪ ನಾಯಕ ಚಳ್ಳೂರು, ಹನುಮಂತಪ್ಪ ಹಗೇದಾಳ, ಧನಂಜಯ್ ಎಲಿಗಾರ್ ಸೇರಿ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.