ADVERTISEMENT

ಗಂಗಾವತಿ: ಅಕ್ರಮವಾಗಿ ದಾಸ್ತಾನು ಇರಿಸಿದ್ದ ₹3.63 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 8:48 IST
Last Updated 17 ಜೂನ್ 2022, 8:48 IST
ಗಂಗಾವತಿ: ಅಕ್ರಮವಾಗಿ ದಾಸ್ತಾನು ಇರಿಸಿದ್ದ ₹3.63 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ
ಗಂಗಾವತಿ: ಅಕ್ರಮವಾಗಿ ದಾಸ್ತಾನು ಇರಿಸಿದ್ದ ₹3.63 ಲಕ್ಷ ಮೌಲ್ಯದ ಪಡಿತರ ಅಕ್ಕಿ ವಶ   

ಗಂಗಾವತಿ (ಕೊಪ್ಪಳ): ಗಂಗಾವತಿ ನಗರದಲ್ಲಿ ರಾಯಚೂರು ರಸ್ತೆಗೆ ಹೊಂದಿಕೊಂಡಿರುವ ರೈಸ್ ಮಿಲ್‌ನಲ್ಲಿ ಆಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 168 ಕ್ವಿಂಟಲ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.

ಭತ್ತದನಾಡಿನಲ್ಲಿ ಆಕ್ರಮ ಪಡಿತರ ಅಕ್ಕಿ ಸಾಗಾಟ ಕುರಿತು ಪದೇ ಪದೇ ಆರೋಪ ಕೇಳಿ ಬರುತ್ತಿದ್ದ ಹಿನ್ನಲೆಯಲ್ಲಿ ವಿದ್ಯಾನಗರ ಸಮೀಪದ ರೈಸ್ ಮಿಲ್ ಮೇಲೆ ದಾಳಿ ನಡೆಸಲಾಗಿದೆ.

ಈ ದಾಳಿಯಲ್ಲಿ 50 ಕೆಜಿ ತೂಕದ ಅಕ್ಕಿಯ 337 ಚೀಲಗಳು ಲಭ್ಯವಾಗಿದ್ದು,ಇದರ ಮೌಲ್ಯ ಒಟ್ಟು ₹3.63ಲಕ್ಷ ಎಂದು ಅಂದಾಜಿಸಲಾಗಿದೆ. ಈ ದಾಳಿ ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಡೆದಿದೆ.

ADVERTISEMENT

ಈ ಕುರಿತು ಪ್ರಕರಣವನ್ನು ಅಗತ್ಯ ಸರಕುಗಳ ಕಾಯ್ದೆಯಡಿ ದಾಖಲಿಸಿ, ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸ ಲಾಗಿದೆ.

ತಹಶೀಲ್ದಾರ್ ಯು.ನಾಗರಾಜ, ಆಹಾರ ಇಲಾಖೆಯ ಶಿರಸ್ತೇದಾರ್ ದೇವರಾಜ, ಆಹಾರ ನಿರೀಕ್ಷಕ ಪವನಕುಮಾರ ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.