ADVERTISEMENT

ಕೆಪಿಎಸ್‌ ಶಾಲೆಗಳ ಮಕ್ಕಳಿಗೆ ಉಚಿತ ಬಸ್‌ ವ್ಯವಸ್ಥೆ: ಸಚಿವ ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 7 ಜುಲೈ 2025, 15:29 IST
Last Updated 7 ಜುಲೈ 2025, 15:29 IST
ಮಧು ಬಂಗಾರಪ್ಪ
ಮಧು ಬಂಗಾರಪ್ಪ   

ಕುಕನೂರು (ಕೊಪ್ಪಳ ಜಿಲ್ಲೆ): ‘ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ರಾಜ್ಯದಾದ್ಯಂತ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿ ‘ಕೆಪಿಎಸ್‌ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಮಕ್ಕಳೇ ಓದುತ್ತಿದ್ದಾರೆ. ಅಲ್ಲಿ ಎಲ್‌ಕೆಜಿಯಿಂದ ಪಿಯುಸಿ ತನಕ ವಿದ್ಯಾಭ್ಯಾಸ ದೊರೆಯುತ್ತಿದೆ. ಅಲ್ಲಿ ಓದುವ ಮಕ್ಕಳಿಗೆ ಅನುಕೂಲ ಕಲ್ಪಿಸಲು ಈ ನಿರ್ಧಾರ ಮಾಡಲಾಗಿದೆ. ಯಾವ ಭಾಗದಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಉಚಿತ ಬಸ್‌ ವ್ಯವಸ್ಥೆ ಮೊದಲು ಆರಂಭಿಸಲಾಗುವುದು’ ಎಂದು ಹೇಳಿದರು.

‘ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ 46 ಸಾವಿರ ಶಾಲೆಗಳಿದ್ದು, 57 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಅವರೆಲ್ಲರ ಅಭಿವೃದ್ಧಿಗೆ ನನ್ನ ಜೊತೆಗೆ ಶಿಕ್ಷಕರು ಕೂಡ ಕ್ರಮ ವಹಿಸಬೇಕು. ಎಲ್ಲರೂ ಶ್ರಮಿಸಿದರೆ ಮಾತ್ರ ಸರ್ಕಾರಿ ಶಾಲೆಗಳ ಸಬಲೀಕರಣ ಸಾಧ್ಯ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.