ADVERTISEMENT

ಎರಡು ಗುಂಪುಗಳ ನಡುವೆ ಘರ್ಷಣೆ: ಹುಲಿಹೈದರ ಗ್ರಾಮದಲ್ಲಿ ನಿಷೇಧಾಜ್ಞೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2022, 17:05 IST
Last Updated 20 ಆಗಸ್ಟ್ 2022, 17:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೊಪ್ಪಳ: ಕನಕಗಿರಿ ತಾಲ್ಲೂಕಿನ ಹುಲಿಹೈದರ ಗ್ರಾಮ ಹಾಗೂ ಸುತ್ತಮುತ್ತಲಿನ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಆಗಸ್ಟ್‌ 30ರ ತನಕ ಶನಿವಾರ ವಿಸ್ತರಣೆ ಮಾಡಲಾಗಿದೆ.

ಆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದರು. ಗ್ರಾಮದಲ್ಲಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಮೊದಲು ಆ. 20ರ ತನಕ ನಿಷೇಧಾಜ್ಞೆ ಹೇರಲಾಗಿತ್ತು. ಈಗ ಅದನ್ನು ವಿಸ್ತರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.