
ಪ್ರಜಾವಾಣಿ ವಾರ್ತೆ
ಮುನಿರಾಬಾದ್: ಸಮೀಪದ ಬೂದುಗುಂಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಬಾವಿ ಗ್ರಾಮದಲ್ಲಿ ಗ್ರಾಮದ ಆರಾಧ್ಯ ದೈವ ಮಾರುತೇಶ್ವರ ಕಾರ್ತಿಕೋತ್ಸವ ಮಂಗಳವಾರದಿಂದ ಆರಂಭವಾಗಲಿದೆ.
ಮಂಗಳವಾರ ಬೆಳಿಗ್ಗೆ ಮಾರುತೇಶ್ವರ ದೇವರಿಗೆ ರುದ್ರಾಭಿಷೇಕ, ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ. ಸಂಜೆ 8 ಗಂಟೆಗೆ ಮಾರುತೇಶ್ವರ ಕಾರ್ತಿಕೋತ್ಸವ ಮತ್ತು ದೀಪೋತ್ಸವ ಸಡಗರದಿಂದ ನಡೆಯಲಿದೆ. ಬುಧವಾರ ಬೆಳಿಗ್ಗೆ ದೇವಸ್ಥಾನದಿಂದ ಕರಿಯಮ್ಮ ದೇವಿ ದೇವಸ್ಥಾನದವರೆಗೆ ಕುಂಭ ಕಳಸ ಸಮೇತ ವಾದ್ಯ ಮೇಳದೊಂದಿಗೆ ಗಂಗೆ ಸ್ಥಳಕ್ಕೆ ಹೋಗಿ ಬರುವುದು, ನಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.