
ಪ್ರಜಾವಾಣಿ ವಾರ್ತೆ
ಕುಷ್ಟಗಿ: ಇಲ್ಲಿಯ ಪಶುವೈದ್ಯಾಧಿಕಾರಿ ಡಾ.ಸಿದ್ಧಲಿಂಗ ಶೆಂಕೀನ ಅವರಿಗೆ ಪ್ರಸಕ್ತ ವರ್ಷದ ‘ಕರುನಾಡ ರತ್ನ’ ಪ್ರಶಸ್ತಿ ಬಂದಿದೆ.
ಈಚೆಗೆ ಬೆಂಗಳೂರಿನ ಕಲಾಗ್ರಾಮದಲ್ಲಿ ಸಾಂಸ್ಕೃತಿಕ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಪ್ರಶಸ್ತಿ ಪ್ರದಾನ ಮಾಡಿದರು.
ನಿವೃತ್ತ ಐ.ಪಿ.ಎಸ್ ಅಧಿಕಾರಿ ಶಂಕರ ಬಿದರಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಮನು ಬಳಿಗಾರ, ಆರ್ಯುವೇದ ವೈದ್ಯ ಡಾ.ವಸುಂದರ ಭೂಪತಿ, ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ರಮೇಶ, ಜಿ.ಗಂಗಾಧರ ಇತರರು ಉಪಸ್ಥಿತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.