ಕೊಪ್ಪಳ: ಜಾನಪದ ಹಾಡುಗಾರ ಹಾಗೂ ಕರ್ನಾಟಕ ಜಾನಪದ ಅಕಾಡೆಮಿಯ ಸದಸ್ಯ ಮೆಹಬೂಬ್ ಕಿಲ್ಲೇದಾರ್ ಅವರನ್ನು 2025–26ನೇ ಸಾಲಿಗೆ ಅಕಾಡೆಮಿಯ ಸ್ಥಾಯಿ ಸಮಿತಿಯ ಸದಸ್ಯರಾಗಿ ನೇಮಕ ಮಾಡಿ ಅಕಾಡೆಮಿಯ ರಿಜಿಸ್ಟ್ರಾರ್ ನಮ್ರತಾ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸಾಲಿನಲ್ಲಿ ಜರುಗುವ ಅಕಾಡೆಮಿಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಹಿರಿಮೆಯನ್ನು ಹೆಚ್ಚಿಸುವಲ್ಲಿ ತಮ್ಮ ಭಾಗವಹಿಸುವಿಕೆ ಪ್ರಮುಖ ಎಂದಿದ್ದಾರೆ. ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ ಗೊಲ್ಲಹಳ್ಳಿ ಅವರ ನೇತೃತ್ವದಲ್ಲಿ ವರ್ಷದುದ್ದಕ್ಕೂ ಕಾರ್ಯಕ್ರಮಗಳು ನಡೆಯುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.