ADVERTISEMENT

ಕೊಪ್ಪಳ | ಗಾಳಿಪಟ ಉತ್ಸವ; ಜನತೆಯ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2025, 5:06 IST
Last Updated 20 ಅಕ್ಟೋಬರ್ 2025, 5:06 IST
ವಿಶ್ವ ಹೃದಯ ದಿನದ ಅಂಗವಾಗಿ ಕೊಪ್ಪಳದ ಕೆ.ಎಸ್. ಆಸ್ಪತ್ರೆ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದಲ್ಲಿ ಆಕಾಶ ದೀಪದೊಂದಿಗೆ ಕಾಣಿಸಿಕೊಂಡ ಯುವತಿಯರು
ವಿಶ್ವ ಹೃದಯ ದಿನದ ಅಂಗವಾಗಿ ಕೊಪ್ಪಳದ ಕೆ.ಎಸ್. ಆಸ್ಪತ್ರೆ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದಲ್ಲಿ ಆಕಾಶ ದೀಪದೊಂದಿಗೆ ಕಾಣಿಸಿಕೊಂಡ ಯುವತಿಯರು    

ಕೊಪ್ಪಳ: ವಿಶ್ವ ಹೃದಯ ದಿನದ ಅಂಗವಾಗಿ ನಗರದ ಕೆ.ಎಸ್. ಆಸ್ಪತ್ರೆ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಗಾಳಿಪಟ ಉತ್ಸವದಲ್ಲಿ ಜನ ಬಾನಂಗಳದಲ್ಲಿ ಹಾರಾಡಿದ ಪಟಗಳನ್ನು ನೋಡಿ ಸಂಭ್ರಮಿಸಿದರು. 

ಹೃದಯದ ಆರೋಗ್ಯ ಜಾಗೃತಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಮಂಗಳೂರಿನ ತಂಡದಿಂದ ಅಂತರರಾಷ್ಟ್ರೀಯ ಖ್ಯಾತಿಯ ತಜ್ಞರಿಂದ ಗಾಳಿಪಟ ಪ್ರದರ್ಶನ ನಡೆದಾಗ ಕ್ರೀಡಾಂಗಣಕ್ಕೆ ಬಂದಿದ್ದಾಗ ಜನ ಫೋಟೊಗಳನ್ನು ತೆಗೆಯಿಸಿಕೊಂಡು ಖುಷಿ ಪಟ್ಟರೆ, ಇನ್ನೂ ಕೆಲವರು ಎತ್ತರದಲ್ಲಿ ಹಾರಾಡಿದ ಪಟಗಳನ್ನು ತದೇಕಚಿತ್ತದಿಂದ ನೋಡುತ್ತಿದ್ದರು.    

ಕೆಎಎಸ್‌ ಆಸ್ಪತ್ರೆ ಮುಖ್ಯಸ್ಥ ಡಾ. ಬಸವರಾಜ ಕ್ಯಾವಟರ್‌, ಶಾಸಕ ದೊಡ್ಡನಗೌಡ ಪಾಟೀಲ, ಬಿಜೆಪಿ ನಾಯಕಿ ಮಧುರಾ ಕರ್ಣಂ, ಗಣೇಶ ಹೊರತಟ್ನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.