ADVERTISEMENT

ಗಣಪತಿ ವಿಸರ್ಜನೆ ವೇಳೆ ಚಾಕು ಇರಿತ; ನಾಲ್ವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 14:14 IST
Last Updated 24 ಸೆಪ್ಟೆಂಬರ್ 2024, 14:14 IST

ಗಂಗಾವತಿ (ಕೊಪ್ಪಳ ಜಿಲ್ಲೆ): ಗಣೇಶ ಮೂರ್ತಿ ವಿಸರ್ಜನೆಯ 17ನೇ ದಿನದ ಮೆರವಣಿಗೆ ವೇಳೆ ಸೋಮವಾರ ರಾತ್ರಿ ಇಲ್ಲಿ ಎರಡು ಗುಂಪುಗಳ ನಡುವಿನ ಜಗಳ ವಿಕೋಪಕ್ಕೆ ಹೋಗಿ, ಒಬ್ಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.

ಚಾಕು ಇರಿತಕ್ಕೆ ಒಳಗಾದ ಗಂಗಾವತಿಯ ಶಿವಕುಮಾರ್‌ (38) ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಣೇಶ್, ಮಂಜುನಾಥ ಹಾಗೂ ಸಾಗರ್ ಎನ್ನುವವರ ಮೇಲೆ ಹಲ್ಲೆಯಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಜನರ ನಡುವೆ ಘಟನೆ ನಡೆದಿದ್ದರಿಂದ ಚಾಕು ಇರಿದಿದ್ದು ಯಾರು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. 

‘ವೈಯಕ್ತಿಕ ಕಾರಣಕ್ಕಾಗಿ ನಡೆದ ಜಗಳದಲ್ಲಿ ಚಾಕು ಇರಿಯಲಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ರಾಮ್‌ ಎಲ್‌. ಅರಸಿದ್ಧಿ ತಿಳಿಸಿದ್ದಾರೆ.

ADVERTISEMENT

ಯುವಕ ಸಾವು: ಗಣಪತಿ ವಿಸರ್ಜನೆಯ ಮೆರವಣಿಗೆ ಮುಗಿಸಿಕೊಂಡು ಮನೆಗೆ ವಾಪಸ್‌ ಹೋಗುವಾಗ ತಾಲ್ಲೂಕಿನ ವಡ್ಡರಹಟ್ಟಿ ಕ್ಯಾಂಪ್ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಕೊಪ್ಪಳ ತಾಲ್ಲೂಕಿನ ಹುಲಿಗಿ ಸಮೀಪದ ಶಿವಪುರ ಗ್ರಾಮದ ನವೀನ್ ಕುಮಾರ್ (27) ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.