ADVERTISEMENT

ಕೊಪ್ಪಳ ಬಂದ್‌ | ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ: ಶಿಕ್ಷಣ ಇಲಾಖೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2025, 15:57 IST
Last Updated 23 ಫೆಬ್ರುವರಿ 2025, 15:57 IST
<div class="paragraphs"><p>&nbsp;ಕೊಪ್ಪಳ ಬಂದ್‌ (ಪ್ರಾತಿನಿಧಿಕ ಚಿತ್ರ)</p></div>

 ಕೊಪ್ಪಳ ಬಂದ್‌ (ಪ್ರಾತಿನಿಧಿಕ ಚಿತ್ರ)

   

ಕೊಪ್ಪಳ: ಕೊಪ್ಪಳ ಬಂದ್‌ ಕರೆ ನೀಡಿರುವ ಕಾರಣ ತಾಲ್ಲೂಕು ವ್ಯಾಪ್ತಿಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೂ ರಜೆ ಘೋಷಣೆ ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಟಿ.ಎಸ್‌., ಆದೇಶ ಹೊರಡಿಸಿದ್ದಾರೆ.

ಬಂದ್‌ ಘೋಷಣೆಯಾದ ದಿನವೇ ಖಾಸಗಿ ಶಾಲೆಗಳ ಒಕ್ಕೂಟ ಬಂದ್‌ ಬೆಂಬಲಿಸಿ ಶಾಲೆಗಳಿಗೆ ರಜೆ ಘೋಷಿಸಿದ್ದವು. ಆದರೆ ಸರ್ಕಾರಿ ಶಾಲೆಗಳಿಗೆ ರಜೆ ನೀಡಿರಲಿಲ್ಲ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡುವಂತೆ ಶಾಸಕ ರಾಘವೇಂದ್ರ ಹಿಟ್ನಾಳ ಹಾಗೂ ಸಂಸದ ರಾಜಶೇಖರ ಹಿಟ್ನಾಳ ಸೂಚಿಸಿದ್ದರಿಂದ ಶಿಕ್ಷಣ ಇಲಾಖೆ ರಜೆ ನೀಡಿ ಆದೇಶ ಹೊರಡಿಸಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.