ADVERTISEMENT

ಕೊಪ್ಪಳ: ಸಿಎಫ್ಐ, ಪಿಎಫ್ಐ ಮುಖಂಡರು ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 8:54 IST
Last Updated 27 ಸೆಪ್ಟೆಂಬರ್ 2022, 8:54 IST
   

ಕೊಪ್ಪಳ: ಜಿಲ್ಲೆಯಲ್ಲಿ ಹಿಂದೆ ನಡೆದ ಪ್ರತಿಭಟನೆ ಹಾಗೂ ಹೋರಾಟಗಳ ವೇಳೆ ಶಾಂತಿ ಭಂಗ ಮಾಡಿದ ಆರೋಪದಡಿ ವಿವಿಧ ಸಂಘಟನೆಗಳ ಇಬ್ಬರು ಪ್ರಮುಖರನ್ನು ಜಿಲ್ಲೆಯ ಪೊಲೀಸರು ಮಂಗಳವಾರ ಬೆಳಗ್ಗೆ ವಶಕ್ಕೆ ಪಡೆದಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾದ ಗಂಗಾವತಿ ಮತ್ತು ಕೊಪ್ಪಳದ ಮುಖ್ಯ ಸಂಘಟಕ ರಸೂಲ್ ಮಹಮ್ಮದ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸೈಯದ್ ಸರ್ಫರಾಜ್ ಹುಸೇನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

ಶಾಂತಿ ಭಂಗ‌ ಮಾಡಿದ ಆರೋಪ ಇವರ ಮೇಲಿದೆ. ವಶಕ್ಕೆ ಪಡೆದವರನ್ನು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಪ್ರಜಾವಾಣಿಗೆ ತಿಳಿಸಿದ್ದಾರೆ.

ADVERTISEMENT

ಮತ್ತೊಬ್ಬ ವಶಕ್ಕೆ

ಕೊಪ್ಪಳ: ಪಿಎಫ್ಐ ಸಂಘಟನೆಯ ಕೊಪ್ಪಳ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಲೀಂ ಖಾದ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ವಶಕ್ಕೆ ಪಡೆದವರ ಒಟ್ಟು ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ‌. ಸಲೀಂ ಕೊಪ್ಪಳದ ಪಠಾಣ ಗಲ್ಲಿಯಲ್ಲಿ ವಾಸವಾಗಿದ್ದ.

ಸಲೀಂ ಹಿಜಾಬ್ ವಿರುದ್ದದ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ. ಇನ್ನಿಬ್ಬರು ಬೇರೆ ಬೇರೆ ಪ್ರತಿಭಟನೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು‌. ಸಿಎಫ್ಐ ರಾಜ್ಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಸೈಯದ್ ಸರ್ಫರಾಜ್ ಹಿಜಾಬ್ ವಿರುದ್ದದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿದ್ದ. ಸಾಮಾಜಿಕ ತಾಣಗಳಲ್ಲಿ ಖಾತೆಗಳನ್ನು ತೆರೆದು ತಮ್ಮ ಸಂಘಟನೆ ಬಗ್ಗೆ ಪ್ರಚಾರ ಮಾಡುತ್ತಿದ್ದ. ಹಿಜಾಬ್ ಗಲಭೆ ಪ್ರಕರಣದಲ್ಲಿ ಸರ್ಫರಾಜ ಪ್ರಮುಖ ಆರೋಪಿಯಾಗಿದ್ದಾನೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.